ಕನ್ನಡದ ಖ್ಯಾತ ಹಾಸ್ಯನಟ ನಿಧನ !! ಅಸಲಿ ಕಾರಣ ಇಲ್ಲಿದೆ ನೋಡಿ !!

ರಾಜು ತಾಳಿಕೋಟೆ ಅವರು ಕಳೆದ ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಅವರು ಚಿಕಿತ್ಸೆಗೂ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದಿಂದ ಕನ್ನಡ ಚಿತ್ರರಂಗ ಹಾಗೂ ಉತ್ತರ ಕರ್ನಾಟಕದ ರಂಗಭೂಮಿಗೆ ಅಪಾರ ನಷ್ಟವಾಗಿದೆ.
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಜನಿಸಿದ ರಾಜು ತಾಳಿಕೋಟೆ ಅವರು, ಚಲನಚಿತ್ರಗಳಲ್ಲಿ ಪ್ರಸಿದ್ಧಿ ಪಡೆದ ನಂತರ ತಾಳಿಕೋಟೆ ನಗರದಲ್ಲಿ ವಾಸವಿದ್ದರು. ಅವರ ಪೂರ್ಣ ಹೆಸರು ರಾಜೇಸಾಬ ಮಕ್ತುಮಸಾಬ್ ತಾಳಿಕೋಟೆ. ಅವರು ಕೇವಲ ನಟನಾಗಿರದೇ, ತಾಳಿಕೋಟೆಯ ಖಾಸ್ಗತೇಶ್ವರ ನಾಟಕ ಮಂಡಳಿಯ ಮಾಲೀಕರಾಗಿದ್ದರು.
ಅನಾರೋಗ್ಯದ ಕಾರಣದಿಂದ ಅವರು ನಾಟಕ ಮತ್ತು ಸಿನಿಮಾ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಅವರ ನಿಧನದ ಸುದ್ದಿ ಕೇಳಿ ಚಿತ್ರರಂಗದ ಹಲವರು ದುಃಖ ವ್ಯಕ್ತಪಡಿಸಿದ್ದಾರೆ. ಅವರ ಹಾಸ್ಯ ಶೈಲಿ ಹಾಗೂ ಅಭಿನಯ ಪ್ರೇಕ್ಷಕರ ಮನಸ್ಸಿನಲ್ಲಿ ಸದಾ ನೆನಪಾಗುವಂತಿದೆ.
ನಿರ್ದೇಶಕ ಯೋಗರಾಜ್ ಭಟ್ ಅವರ ‘ಮನಸಾರೆ’ (2009) ಚಿತ್ರದ ಮೂಲಕ ರಾಜು ತಾಳಿಕೋಟೆ ಅವರು ಜನಪ್ರಿಯತೆ ಗಳಿಸಿದರು. ನಂತರ ‘ಪಂಚರಂಗಿ’, ‘ಮತ್ತೊಂದ್ ಮದುವೇನಾ..!’, ‘ಮೈನಾ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಅವರು ತಮ್ಮದೇ ಆದ ವಿಶಿಷ್ಟ ಹಾಸ್ಯ ಶೈಲಿಯಿಂದ ಪ್ರೇಕ್ಷಕರ ಗಮನ ಸೆಳೆದಿದ್ದರು.