ಡಿ ಬಾಸ್ ದರ್ಶನ್ ಆರೋಗ್ಯ ಕಾಪಾಡಿಕೊಳ್ಳಿ ಎಂದು ಹೇಳಲು ಕಾರಣವೇನು..?

By Infoflick Correspondent

Updated:Thursday, April 28, 2022, 09:14[IST]

ಡಿ ಬಾಸ್ ದರ್ಶನ್ ಆರೋಗ್ಯ ಕಾಪಾಡಿಕೊಳ್ಳಿ ಎಂದು ಹೇಳಲು ಕಾರಣವೇನು..?

ಡಿ ಬಾಸ್ ದರ್ಶನ್ ತೂಗುದೀಪ್ ಅವರು ಮೆಜೆಸ್ಟಿಕ್ ಸಿನಿಮಾ ಮೂಲಕ ಕನ್ನಡ ಫಿಲ್ಮಂ ಇಂಡಸ್ಟ್ರಿಗೆ ಪಾದಾರ್ಪಣೆ ಮಾಡಿದರು. ಅಂದಿನಿಂದ ಇಂದಿನವರೆಗೂ ಡಿ ಬಾಸ್ ಸಿನಿಮಾ ರಂಗದಲ್ಲಿ ಹಿಂತಿರುಗಿ ನೋಡಿದ್ದೇ ಇಲ್ಲ. ಸದ್ಯ ದರ್ಶನ್ ಅವರು ಕ್ರಾಂತಿ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಶೈಲಜಾ ನಾಗ್ ಮತ್ತು ಬಿ ಸುರೇಶ್ ಅವರು ಕ್ರಾಂತಿ ಚಿತ್ರದ ನಿರ್ಮಾಪಕರಾಗಿದ್ದಾರೆ. ಇನ್ನು ವಿ.ಹರಿಕೃಷ್ಣ ಅವರು ಈ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಸಂಗೀತ ನಿರ್ದೇಶನವನ್ನೂ ಮಾಡುತ್ತಿದ್ದಾರೆ. ಕ್ರಾಂತಿ ಚಿತ್ರ ಶೂಟಿಂಗ್ ಹಂತದಲ್ಲಿದೆ.

ಕನ್ನಡದಲ್ಲಿ ತಯಾರಾಗುವ ಕ್ರಾಂತಿ ಚಿತ್ರ ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಸೇರಿದಂತೆ ಐದು ಭಾಷೆಗಳಲ್ಲಿ ರಿಲೀಸ್ ಆಗಲಿದೆ. ಇದು ದರ್ಶನ್ 55ನೇ ಚಿತ್ರವಾಗಿದ್ದು, ಈ ಚಿತ್ರದ ಫಸ್ಟ್ ಲುಕ್ ನಲ್ಲಿ ದರ್ಶನ್ ಅವರು ಎಂದಿನಂತೆ ಕಾಣಿಸಿಕೊಂಡಿದ್ದಾರೆ. ಇನ್ನು ದರ್ಶನ ಅವರ 56ನೇ ಸಿನಿಮಾವನ್ನು ಯಶಸ್ವಿ ನಿರ್ದೇಶಕ ತರುಣ್ ಸುಧೀರ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ರಾಕ್ ಲೈನ್ ವೆಂಕಟೇಶ್ ಅವರು ನಿರ್ಮಾಣ ಮಾಡುತ್ತಿದ್ದಾರೆ.    

ಬೆಂಗನೂರಿನ ಆರ್ ಆರ್ ನಗರದಲ್ಲಿರುವ ಸ್ಪರ್ಶ ಆಸ್ಪತ್ರೆಗೆ ನಟ ದರ್ಶನ್ ಅವರು ಭೇಟಿ ಕೊಟ್ಟಿದ್ದರು. ಈ ವೇಳೆ ಆಸ್ಪತ್ರೆಯ ಸಿಬ್ಬಂದಿಯನ್ನು ಉದ್ದೇಶಿಸಿ ದರ್ಶನ್ ಅವರು ಮಾತನಾಡಿದರು. ಆಗ ದರ್ಶನ್ ಅವರು ಅಭಿಮಾನಿಗಳಿಗೆ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಸೂಚಿಸಿದ್ದಾರೆ. ಆರೋಗ್ಯ ಯಾರಿಗೆಂದರೆ ಅವರಿಗೆ ಬರುವುದಿಲ್ಲ. ಇರುವ ಆರೋಗ್ಯವನ್ನು ಕಾಪಾಡಿಕೊಳ್ಳಿ. ಜೀವನದಲ್ಲಿ ಮನುಷ್ಯನಿಗೆ ಆರೋಗ್ಯ ತುಂಬಾ ಮುಖ್ಯ ಎಂದು ಕಿವಿ ಮಾತುಗಳನ್ನು ಹೇಳಿದರು.