ಹಿಂದಿ ಹೇರಿಕೆ ವಿಷಯದ ವಿರುದ್ದ ಗುಡುಗಿದ ನಟ ದರ್ಶನ್ ಹೇಳಿದ್ದೇನು ಗೊತ್ತಾ..?

Updated: Wednesday, September 16, 2020, 09:45 [IST]

ಹೌದು ಈಗಾಗಲೇ ಕಳೆದ ಮೂರ್ನಾಲ್ಕು ದಿನಗಳಿಂದ ಹಿಂದಿ ಹೇರಿಕೆ ವಿಷಯವಾಗಿ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ .ಮತ್ತು ಇದೇ ಹಿನ್ನೆಲೆಯಲ್ಲಿ ಹಿಂದಿ ದಿವಸ್ ಆಚರಣೆ ಮಾಡಲು ಮುಂದಾಗಿದ್ದ ಕೆಲ ಸಂಸ್ಥೆಗಳಿಗೆ, ಮತ್ತು ಕೆಲ ಜನರಿಗೆ, ನಮ್ಮ ಕನ್ನಡ ಪರ ಸಂಘದವರು ಈಗಾಗಲೇ ಸರಿಯಾಗಿ ಕ್ಲಾಸ್ ತೆಗೆದುಕೊಂಡು ಇದನ್ನು ನಿಲ್ಲಿಸಿದ್ದಾರೆ. ಮತ್ತು ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ಸಾಕಷ್ಟು ಕನ್ನಡಿಗರು ಗುಡುಗಿದ್ದಾರೆ.    

Advertisement

ಜೊತೆಗೆ ತಮಿಳು ಸಿನಿಮಾ ಇಂಡಸ್ಟ್ರಿಯಲ್ಲಿ ಕೂಡ ಯುವ ನಾಯಕರು ನನಗೆ ಹಿಂದಿ ಬರಲ್ಲ ಹೋಗೋ ಎನ್ನುತ್ತಾ ಹಿಂದಿ ಹೇರಿಕೆ ವಿರುದ್ಧ ಅವರು ಕೂಡ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಇದೇ ನಿಟ್ಟಿನಲ್ಲಿ ನಮ್ಮ ಕನ್ನಡ ಸಿನಿಮಾ ಇಂಡಸ್ಟ್ರಿಯ ನಾಯಕರಾದ, ಧನಂಜಯ್, ಸತೀಶ್ ನೀನಾಸಂ, ನಿಖಿಲ್, ಇವರೆಲ್ಲರೂ ಕೂಡ ನಂಗೆ ಹಿಂದಿ ಬರಲ್ಲ ಹೋಗೋ, ನನಗೆ ನನ್ನ ಕನ್ನಡ ಭಾಷೆಯೇ ನನ್ನ ರಾಷ್ಟ್ರ ಭಾಷೆ, ಎನ್ನುತಾ ಹಿಂದಿ ಹೇರಿಕೆ ವಿರುದ್ಧ ಮಾತನಾಡಿದ್ದರು.    

ಆದರೆ ಈಗ ಬಂದಿರುವ ಮಾಹಿತಿ ಪ್ರಕಾರ ನಟ ದರ್ಶನ್ ಅವರು ಕೂಡ ಈ ಹಿಂದಿ ಹೇರಿಕೆ ವಿರುದ್ಧ ತಮ್ಮ ಅಭಿಯಾನ ಆರಂಭಿಸಿದ್ದಾರೆ.ಮತ್ತು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಹೌದು ನಟ ದರ್ಶನ್ ಅವರು ಹೇಳಿದ ಹಾಗೆ " ಬಹಳ ವರ್ಷಗಳಿಂದಲೂ ಈ ಹಿಂದಿ ಹೇರಿಕೆ ಕಾಲ ಕ್ರಮೇಣ ಹೆಚ್ಚಾಗುತ್ತಲೇ ಇದೆ. ಈಗಾಗಲೇ ಕರ್ನಾಟಕದ ಬಾರ್ಡರ್ ಪ್ರದೇಶಗಳಲ್ಲಿ ಅನ್ಯ ಭಾಷೆಗಳ ಬಳಕೆಯಿಂದ ನಮ್ಮ ಕನ್ನಡ ಭಾಷೆಯ ಅಸ್ತಿತ್ವಕ್ಕೆ ಧಕ್ಕೆಯುಂಟಾಗುತ್ತಿದೆ.  ಇದನ್ನು ಪ್ರತಿಭಟಿಸದೆ ನಾವು ಸುಮ್ಮನಿದ್ದರೆ ಮುಂದೆ ಕನ್ನಡಿಗ ಎನ್ನುವ ಅಸ್ತಿತ್ವವೇ ದೂರವಾಗುವ ದಿನಗಳು ಹತ್ತಿರದಲ್ಲೇ ಇದೆ.

ಸ್ವಾಭಿಮಾನಿ ಕನ್ನಡಿಗರಿಗೆ ಕನ್ನಡವೇ ರಾಷ್ಟ್ರ ಭಾಷೆ. ಕನ್ನಡಿಗರ ತೆರಿಗೆ ಹಣದಲ್ಲಿ ಹಿಂದಿ ದಿವಸ್ ಆಚರಣೆ ಯೋಗ್ಯವಲ್ಲ. ಅದು ಕೇವಲ ಉತ್ತರ ಭಾರತದ ಕೆಲವು ರಾಜ್ಯಗಳಿಗೆ ಸೀಮಿತವಾಗಿದ್ದರೆ ಒಳಿತು. ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವುದು ನಮ್ಮ ಭಾರತ ಸಂವಿಧಾನದ ಪ್ರತೀಕವಾಗಿದೆ. ಯಾವುದೋ ಉತ್ತರದ ಒಂದು ಪ್ರಾದೇಶಿಕ ಭಾಷೆಯನ್ನು ನಮ್ಮ ಮೇಲೆ ಹೇರಿ ನಮ್ಮ ಸಂಸ್ಕೃತಿ, ಭಾಷೆ, ನೆಲೆಯನ್ನು ಕಸಿದುಕೊಳ್ಳುವುದು ಹೀನಾಯಕರ ಸಂಗತಿಯೆಂದರೆ ತಪ್ಪಾಗಲಾರದು.    

ನಮ್ಮ ಕೊನೆಯುಸಿರಿರುವವರೆಗೂ ಕನ್ನಡ ಪರವಾಗಿ ನಿಲ್ಲುತೇವೆ. ಕನ್ನಡವೇ ಸತ್ಯ, ಕನ್ನಡವೇ ನಿತ್ಯ" ಎಂದಿದ್ದಾರೆ ಡಿ ಬಾಸ್..ಮತ್ತು ಈ ರೀತಿ ತಮ್ಮ ಅಭಿಪ್ರಾಯ ತಿಳಿಸಿ ಹಿಂದಿ ಹೇರಿಕೆ ವಿರುದ್ಧ ಧ್ವನಿ ಎತ್ತಿರುವ ನಟ ದರ್ಶನ್ ಅವರ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆ ಏನೆಂಬುದನ್ನು ನಮ್ಮ ಕಾಮೆಂಟ್ ಬಾಕ್ಸ್ ಗೆ ಕಮೆಂಟ್ ಮಾಡಿ, ಮತ್ತು ನಮ್ಮ ಕನ್ನಡ ಭಾಷೆಯೇ ನಮಗೆ ನಮ್ಮ ರಾಷ್ಟ್ರಭಾಷೆ , ಎಂದು ಕಮೆಂಟ್ ಮಾಡಿ ಧನ್ಯವಾದಗಳು....