Ganesh : ಮತ್ತೆ ಕಿರುತೆರೆಗೆ ಕಂಬ್ಯಾಕ್ ಆದ ಗೊಲ್ಡನ್ ಸ್ಟಾರ್ ! ಈ ರಿಯಾಲಿಟಿ ಶೋ ವಿಶೇಷತೆ ಏನು ?

By Infoflick Correspondent

Updated:Saturday, July 16, 2022, 08:29[IST]

Ganesh :  ಮತ್ತೆ ಕಿರುತೆರೆಗೆ ಕಂಬ್ಯಾಕ್ ಆದ ಗೊಲ್ಡನ್ ಸ್ಟಾರ್ ! ಈ ರಿಯಾಲಿಟಿ ಶೋ ವಿಶೇಷತೆ ಏನು ?

ಸ್ಟಾರ್​ ಸುವರ್ಣ'  ವಾಹಿನಿಯಲ್ಲಿ ಹೊಸ ರಿಯಾಲಿಟಿ ಶೋ 'ಇಸ್ಮಾರ್ಟ್​ ಜೋಡಿ' ಪ್ರಸಾರಕ್ಕೆ ಕ್ಷಣಗಣನೆ ಶುರುವಾಗಿದೆ.  ಸ್ಮಾರ್ಟ್ ಆಗಿ ಮುಗುಳುನಗೆ ಹುಡುಗ ಇಸ್ಮಾರ್ಟ್ ಶೋ ನಡೆಸಿಕೊಡಲಿದ್ದಾರೆ. ಪ್ರತಿ ವೀಕೆಂಡ್​ನಲ್ಲಿ ಗಣೇಶ್ ಅವರನ್ನು ಕಿರುತೆರೆಯಲ್ಲಿ ನೋಡಲು ಅವರ ಫ್ಯಾನ್ಸ್​ ಕಾತರಾಗಿದ್ದಾರೆ. ಮನರಂಜನೆಯ ಮತ್ತು ಸ್ನೇಹದ ಕುರಿತಾದ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿರುವ ಗಣೇಶ್ ಈಗ ಮೊದಲ ಬಾರಿಗೆ ಸೆಲೆಬ್ರಿಟಿ ಜೋಡಿಗಳ ಕುರಿತಾಗಿ ಒಂದು ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ.

ಈಗಾಗಲೇ ಪ್ರೋಮೋಗಳ ಮೂಲಕ ಪ್ರೇಕ್ಷಕರ ಗಮನ ಸೆಳೆಯಲಾಗಿದೆ. ಹಲವು ಜೋಡಿಗಳು ಈ ಶೋನಲ್ಲಿ ಭಾಗವಹಿಸಲಿವೆ. ಚಿತ್ರರಂಗ, ಕಿರುತೆರೆ ಮತ್ತು ಸೋಷಿಯಲ್​ ಮೀಡಿಯಾದಲ್ಲಿ ಜನಪ್ರಿಯ ಆಗಿರುವ ಜೋಡಿಗಳು ಇದರಲ್ಲಿ ಭಾಗವಹಿಸುತ್ತಿವೆ.
ಇಸ್ಮಾರ್ಟ್​ ಜೋಡಿ' ಶೋನಲ್ಲಿ ಗೆದ್ದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುತ್ತದೆ.   

ಖ್ಯಾತ ನಟ ಗೋಲ್ಡನ್ ಸ್ಟಾರ್ ಗಣೇಶ್ ನಡೆಸಿಕೊಡುವ ಈ ರಿಯಾಲಿಟಿ ಶೋ ಇದೇ ಜುಲೈ 16ರ ಶನಿವಾರದಿಂದ ಆರಂಭವಾಗಲಿದೆ. ಹತ್ತು ಸೆಲೆಬ್ರಿಟಿ ಜೋಡಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಇವತ್ತಿನ ದಿನಗಳಲ್ಲಿ ದಂಪತಿಗಳು ಸಣ್ಣಸಣ್ಣ ವಿಷಯಕ್ಕೂ ಬಹಳ ಬೇಗ ದೂರ ಆಗುತ್ತಿದ್ದಾರೆ. ಜೀವನ ಎಂದರೆ ಅದಲ್ಲ, ಇಲ್ಲಿ ಏಳು, ಸುಖ-ದುಃಖ ಎಲ್ಲವೂ ಇರುತ್ತದೆ ಎಂಬುದನ್ನು ಹೇಳುವ ಪ್ರಯತ್ನ ಇದು. ಈರಿಯಾಲಿಟಿ ಶೋ ಒಟ್ಟು 26 ಕಂತುಗಳನ್ನು ಹೊಂದಿದ್ದು ಪ್ರತಿ ಶನಿವಾರ ಮತ್ತು ಭಾನುವಾರ ರಾತಿ 9 ಗಂಟೆಗೆ ಪ್ರಸಾರವಾಗಲಿದೆ. ವಿನಯ್​ ಗೌಡ ಮತ್ತು ಅಕ್ಷತಾ ಗೌಡ, ಸುಮನ್​ ನಗರ್​ಕರ್​ ಮತ್ತು ಗುರುದೇವ್​ ನಾಗರಾಜ, ದಿಶಾ ಮದನ್​ ಮತ್ತು ಶಶಾಂಕ್​ ವಾಸುಕಿ ಗೋಪಾಲ್​, ಪ್ರತೀಕ್​ ಪ್ರೊ ಮತ್ತು ಮೌಲ್ಯಶ್ರೀ ಎಂ, ಶ್ರೀರಾಮ ಸುಳ್ಯ ಮತ್ತು ಪುನೀತ್​ ಆಚಾರ್ಯ, ರಘು ವೈನ್​ ಸ್ಟೋರ್​ ಮತ್ತು ವಿದ್ಯಾಶ್ರೀ, ಇಂಪನಾ ಜಯರಾಜ್​ ಮತ್ತು ಅಜಿತ್​ ಜಯರಾಜ್​, ಸಪ್ನ ದೀಕ್ಷಿತ್​ ಮತ್ತು ಅಶ್ವಿನ್​ ದೀಕ್ಷಿತ್​, ಜೈ ಜಗದೀಶ್​ ಮತ್ತು ವಿಜಯಲಕ್ಷ್ಮಿ ಸಿಂಗ್​, ರಿಚರ್ಡ್​ ಲೂಯಿಸ್​ ಮತ್ತು ಹ್ಯಾರಿಯೆಟ್​ ಲೂಯಿಸ್​ ದಂಪತಿ ಇದರಲ್ಲಿ ಭಾಗವಹಿಸುತ್ತಿದ್ದಾರೆ.

ಇಲ್ಲಿ ತೀರ್ಪುಗಾರರು ಇರುವುದಿಲ್ಲ. ನಾನು ನಿರೂಪಕನಾಗಿರುತ್ತೇನೆ. ಸ್ಪರ್ಧಿಗಳಿಗೆ ಹಲವು ಟಾಸ್ಕ್​ಗಳನ್ನು ನೀಡಲಾಗುತ್ತದೆ. ಗೆದ್ದವರಿಗೆ ಅಂಕಗಳನ್ನು ನೀಡಲಾಗುತ್ತದೆ. ಮೊದಲ ಐದು ಕಂತುಗಳಲ್ಲಿ ಯಾವುದೇ ಎಲಿಮಿನೇಷನ್​ ಇರುವುದಿಲ್ಲ. ಗೆದ್ದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುತ್ತದೆ. ಇಲ್ಲಿ ಚಿತ್ರರಂಗ, ಕಿರುತೆರೆ ಮತ್ತು ಸೋಷಿಯಲ್​ ಮೀಡಿಯಾದಲ್ಲಿ ಜನಪ್ರಿಯವಾಗಿರುವ ಜೋಡಿಗಳು ಭಾಗವಹಿಸುತ್ತಿವೆ. ಜತೆಗೆ ಸಿನಿಮಾ ಪ್ರಮೋಷನ್​ಗಳು ಸಹ ಇರುತ್ತವೆ. ಸೆಲೆಬ್ರಿಟಿಗಳು ಆಗಾಗ ಅತಿಥಿಯಾಗಿ ಬರುತ್ತಿರುತ್ತಾರೆ' ಎಂದಿದ್ದಾರೆ ಗಣೇಶ್.

'ಇದುವರೆಗೂ ಮನರಂಜನೆಯ ಮತ್ತು ಸ್ನೇಹದ ಕುರಿತಾದ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದೇನೆ. ಈಗ ಮೊದಲ ಬಾರಿಗೆ ಸೆಲೆಬ್ರಿಟಿ ಜೋಡಿಗಳ ಕುರಿತಾಗಿ ಒಂದು ಕಾರ್ಯಕ್ರಮ ನಡೆಸಿಕೊಡುತ್ತಿದ್ದೇನೆ. ಎರಡು ವರ್ಷ ಗ್ಯಾಪ್​ ಆಗಿತ್ತು. ಬೇರೇನೋ ಹೊಸದು ಮಾಡಬೇಕು, ಫ್ಯಾಮಿಲಿ ಆಡಿಯನ್ಸ್​ ತಲುಪಬೇಕು ಎಂದು ಯೋಚಿಸುತ್ತಿದ್ದಾಗ ಸ್ಟಾರ್​ ಸುವರ್ಣದವರು ಈ ಕಾರ್ಯಕ್ರಮದ ಕುರಿತು ಹೇಳಿದರು. ಇದೊಂದು ಸೆಲೆಬ್ರಿಟಿ ಜೋಡಿಯ ಕುರಿತಾದ ಕಾರ್ಯಕ್ರಮ. ಇಲ್ಲಿ ಹೊಸದಾಗಿ ಮದುವೆಯಾದವರಿಂದ ಹಿಡಿದು 40 ವರ್ಷ ದಾಂಪತ್ಯ ಜೀವನ ನಡೆಸಿದ ಹಿರಿಯರವರೆಗೂ ಇದ್ದಾರೆ' ಎಂದು ಗಣೇಶ್​ ಹೇಳಿದ್ದಾರೆ.