ಚಿತ್ರರಂಗಕ್ಕೆ ಇನ್ನೊಂದು ಶಾಕ್ ಮಗಳು ಜಾನಕಿ ಧಾರಾವಾಹಿ ಖ್ಯಾತಿಯ ನಟ ವಿಧಿವಶ!

By Infoflick Correspondent

Updated:Wednesday, September 14, 2022, 17:26[IST]

ಚಿತ್ರರಂಗಕ್ಕೆ ಇನ್ನೊಂದು ಶಾಕ್ ಮಗಳು ಜಾನಕಿ ಧಾರಾವಾಹಿ ಖ್ಯಾತಿಯ ನಟ ವಿಧಿವಶ!

ಬಣ್ಣದ ಲೋಕಕ್ಕೆ ಒಂದಾದಮೇಲೆ ಒಂದರಂತೆ ಶಾಕ್​ ಎದುರಾಗುತ್ತಲೇ ಇದೆ. ಕಳೆದ ಎರಡು ವರ್ಷಗಳಲ್ಲಿ ಹಿರಿತೆರೆ ಹಾಗೂ ಕಿರುತೆರೆಯ ಅನೇಕ ಕಲಾವಿದರು ಇಹಲೋಕ ತ್ಯಜಿಸಿದ್ದಾರೆ.

ಈಗ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಕಿರುತೆರೆ ಕಲಾವಿದ ಮಂಡ್ಯ ರವಿ ಅವರು ಇಂದು (ಸೆಪ್ಟೆಂಬರ್ 14) ನಿಧನ ಹೊಂದಿದ್ದಾರೆ. ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿತ್ತು. ಅವರ ನಿಧನದಿಂದ ಬಣ್ಣದ ಲೋಕಕ್ಕೆ ಸಾಕಷ್ಟು ನಷ್ಟ ಉಂಟಾಗಿದೆ. ಒಂದೊಳ್ಳೆಯ ಕಲಾವಿದನನ್ನು ಕಳೆದುಕೊಂಡಿದ್ದಕ್ಕೆ ಅನೇಕರು ದುಃಖ ವ್ಯಕ್ತಪಡಿಸಿದ್ದಾರೆ.

ಮಗಳು ಜಾನಕಿ ರವಿ ಪ್ರಸಾದ್ ಮಂಡ್ಯ ನಿಧನರಾಗಿದ್ದಾರೆ. ಮಲ್ಟಿಪಲ್ ಆರ್ಗನ್ಸ್ ಡ್ಯಾಮೇಜ್ ಆದ ಕಾರಣ ಇಹಲೋಕ ತ್ಯಜಿಸಿದ್ದಾರೆ.  ಹಲವಾರು ಸೀರಿಯಲ್ ಹಾಗು ಸಿನಿಮಾ ಮೂಲಕ ಮನೆ ಮಾತಾಗಿದ್ದ ರವಿ ಕಣ್ಮರೆಯಾಗಿದ್ದಾರೆ. ರವಿ ಅಗಲಿಕೆಗೆ ಕಲಾವಿದರು ಕಂಬನಿ ಮಿಡಿದಿದ್ದಾರೆ.

ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಮಂಡ್ಯ ರವಿ ನಿಧನರಾಗಿದ್ದು, ಇನ್ನು ಕೆಲವೇ ಗಂಟೆಗಳಲ್ಲಿ ಬಿಜಿಎಸ್ ಆಸ್ಪತ್ರೆಯಿಂದ ಮಂಡ್ಯಕ್ಕೆ ಪಾರ್ಥಿವ ಶರೀರವನ್ನು ರವಾನೆ ಮಾಡಲಾಗುವುದು.