ರಾಧಿಕಾ ಕುಮಾರಸ್ವಾಮಿ ಸಿನಿಮಾರಂಗಕ್ಕೆ ಕಂಬ್ಯಾಕ್?ಇಲ್ಲಿದೆ ಹೆಚ್ಚಿನ ವಿವರ

By Infoflick Correspondent

Updated:Monday, May 2, 2022, 19:24[IST]

ರಾಧಿಕಾ ಕುಮಾರಸ್ವಾಮಿ ಸಿನಿಮಾರಂಗಕ್ಕೆ ಕಂಬ್ಯಾಕ್?ಇಲ್ಲಿದೆ ಹೆಚ್ಚಿನ ವಿವರ

ಸಾಮಾಜಿಕ ಜಾಲತಾಣದಲ್ಲಿ ರಾಧಿಕಾ ಕುಮಾರಸ್ವಾಮಿ ಹೆಚ್ಚು ಆಕ್ಟಿವ್ ಆಗಿದ್ದಾರೆ. ರೀಲ್ಸ್ , ಡ್ಯಾನ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಇತ್ತೀಚೆಗೆ ರಾಧಿಕಾ ಅವರು ವಿಡಿಯೋ ಒಂದನ್ನು ಇನ್ಸ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಕನ್ನಡದ ಮೆಲೋಡಿ ಹಾಡಿಗೆ ರಾಧಿಕಾ ರೀಲ್ಸ್ ಮಾಡಿ ವಿಡಿಯೋ ಶೇರ್ ಮಾಡಿದ್ದಾರೆ.  

ನಟಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಅಭಿನಯ ಮಾತ್ರ ಅಲ್ಲ, ಅವರಿಗೆ ಡಾನ್ಸ್‌ನಲ್ಲೂ ಅಷ್ಟೇ ಹೆಚ್ಚಿನ ಆಸಕ್ತಿ ಇದೆ.
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ರಾಧಿಕಾ ಕುಮಾರಸ್ಟಾಮಿ ಮತ್ತೆ ಸಿನಿಮಾಕ್ಕೆ ಕಮ್ ಬ್ಯಾಕ್ ಮಾಡುವ ಸೂಚನೆ ಕೊಟ್ಟಿದ್ದಾರೆ. ಆದಷ್ಟು ಬೇಗ ರಾಧಿಕಾ ಮತ್ತೆ  ಸಿನಿಮಾ ಮಾಡಲಿ ಅನ್ನುವುದ ಅಭಿಮಾನಿಗಳ ಆಸೆ. ಅದನ್ನು  ಸಾಕಷ್ಟು ಮಂದಿ ಎಲ್ಲಾ ವಿಡಿಯೋ ಗಳಿಗೆ ಕಮೆಂಟ್ ಮಾಡುವ ಮೂಲಕ ತಿಳಿಸಿದ್ದಾರೆ. 

ಕೋವಿಡ್ ಗೂ ಮುನ್ನ ಹಲವು ಚಿತ್ರಗಳಲ್ಲಿ ನಟಿಸಿರುವ ಅವರು ನಂತರದ ದಿನಗಳಲ್ಲಿ ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ರಾಧಿಕಾ ಅವರು ಹೊಸ ವಿಡಿಯೋ ಅಪ್ಲೋಡ್‌ ಮಾಡಿದ್ದಾರೆ. ಈ ವಿಡಿಯೋದಲ್ಲಿ ರಾಧಿಕಾ ಸಿಂಪಲ್ ಗೌನ್ ತೊಟ್ಟು ಬೋಟ್‌ನಲ್ಲಿ ಪ್ರಯಾಣ ಮಾಡುತ್ತಾ ಇದ್ದಾರೆ. ಚಲಿಸುವ ಬೋಟ್‌ನಲ್ಲಿ ರಾಧಿಕಾ ಸುಂದರವಾಗಿ ಕಾಣುತ್ತಿದ್ದಾರೆ. 

ಅಭಿಮಾನಿಗಳ ಆಸೆಯಂತೆ ರಾಧಿಕಾ ಕುಮಾರಸ್ವಾಮಿ ಮತ್ತೆ ಸಿನಿಮಾ ರಂಗಕ್ಕೆ ಬರಲಿದ್ದಾರೆ.ಎನ್ನುವ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಇದೀಗ ಮಹಿಳಾ ಪ್ರಧಾನ ಸಿನಿಮಾವೊಂದಕ್ಕೆ ಸಹಿ ಮಾಡಿದ್ದಾರೆ ಎನ್ನಲಾಗುತ್ತಿದೆ. ರಾಧಿಕಾ ಮುಂದೆ ಯಾವ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಬಿಟ್ಟು ಕೊಟ್ಟಿಲ್ಲ. ದಷ್ಟು ಬೇಗ ಮತ್ತೊಂದು ಸಿನಿಮಾ ಮಾಡಲಿ ಅನ್ನುವುದ ಅಭಿಮಾನಿಗಳ ಆಸೆ.