ಮತ್ತೆ ಟ್ರೋಲಿಗರ ಬಾಯಿಗೆ ಆಹಾರವಾದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ:ಯಾಕೆ ಗೊತ್ತಾ ?

By Infoflick Correspondent

Updated:Wednesday, April 27, 2022, 09:13[IST]

ಮತ್ತೆ ಟ್ರೋಲಿಗರ ಬಾಯಿಗೆ ಆಹಾರವಾದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ:ಯಾಕೆ ಗೊತ್ತಾ ?

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸದಾ ಟ್ರೋಲ್ ಪೇಜ್ ಗಳಿಗೆ ರಸದೌತಣ ಉಣಬಡಿಸುವ ಮಹಾರಾಣಿ ಎಂದರೆ ತಪ್ಪಾಗುವುದಿಲ್ಲ. ಯಾವಾಗಲೂ ಒಂದಲ್ಲ ಒಂದು ವಿಚಾರಗಳಿಗೆ ರಶ್ಮಿಕಾ ಅವರು ಟ್ರೋಲ್ ಆಗುತ್ತಲೇ ಇರುತ್ತಾರೆ. ಟ್ರೋಲ್ ಪೇಜ್ ಗಳಲ್ಲಿ ಮೊದಲಿಗೆ ಫಸ್ಟ್ ರಶ್ಮಿಕಾ ಮಂದಣ್ಣ ಇದ್ದೇ ಇರುತ್ತಾರೆ. ಕನ್ನಡದ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಸಿನಿರಂಗಕ್ಕೆ ಪಾದಾರ್ಪಣೆ ಮಾಡಿದರು. ಸ್ಯಾಂಡಲ್ ವುಡ್, ಬಾಲಿವುಡ್ ಹಾಗೂ ಟಾಲಿವುಡ್ ನಲ್ಲಿ ಬಹುಬೇಡಿಕೆಯ ನಟಿಯಾಗಿದ್ದಾರೆ. 

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ನಟ ಮತ್ತು ನಿರ್ದೇಶಕ ರಕ್ಷಿತ್ ಶೆಟ್ಟಿ, ಚಾಲೆಂಜಿಂಗ್ ಸ್ಟಾರ್ ದರ್ಶನ್, ವಿಜಯ್ ದೇವರ ಕೊಂಡ, ಮಹೇಶ್ ಬಾಬು, ನಿತಿನ್, ನಾಗಶೌರ್ಯ, ಕಾರ್ತಿ, ಅಲ್ಲು ಅರ್ಜುನ್ ಹಾಗೂ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಜೊತೆ ರಶ್ಮಿಕಾ ಮಂದಣ್ಣ ಹೀರೋಯಿನ್ ಆಗಿ ನಟಿಸಿದ್ದಾರೆ. ಈಗಾಗಲೇ ಕನ್ನಡ, ತೆಲುಗಿನಲ್ಲಿ ದೊಡ್ಡ ಯಶಸ್ಸು ಕಂಡಿದ್ದಾರೆ. ಚಲೋ, ಗೀತಾ ಗೋವಿಂದಂ, ಡಿಯರ್ ಕಾಮ್ರೇಡ್, ಸರಿಲೇರು ನೀಕೆವ್ವರು, ಪೊಗರು ಅಂತಹ ಸಿನಿಮಾಗಳು ರಶ್ಮಿಕಾಗೆ ಹೆಚ್ಚು ಖ್ಯಾತಿ ತಂದು ಕೊಟ್ಟಿದೆ. ಪುಷ್ಪ ಚಿತ್ರದಲ್ಲೂ ರಶ್ಮಿಕಾ ಮಂದಣ್ಣ ಮಿಂಚಿದ್ದು, ಅವರ ಲಕ್ ಈಗ ಡಬಲ್ ಆಗಿದೆ.  

ಹಲವಾರು ಪ್ರಾಡಕ್ಟ್ ಗಳಿಗೆ ಬ್ರ್ಯಾಂಡ್ ಅಂಬ್ಯಾಸಿಡರ್ ಆಗಿದ್ದಾರೆ. ಹತ್ತಾರು ಪ್ರಾಡಕ್ಟ್ ಗಳ ಜಾಹೀರಾತುಗಳಲ್ಲಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಅದರಂತೆಯೇ, ಈಗ ಮದ್ಯದ ಜಾಹೀರಾತಿನಲ್ಲಿಯೂ ರಶ್ಮಿಕಾ ಮಂದಣ್ಣ ಅವರು ನಟಿಸಿದ್ದಾರೆ. ರಶ್ಮಿಕಾ ಮಂದಣ್ಣ ಜೊತೆಗೆ ಬಾಲಿವುಡ್ ನಟ ವರುಣ್ ಧವನ್ ಕೂಡ ಕಾಣಿಸಿಕೊಂಡಿದ್ದಾರೆ. ಕಿಂಗ್ ಫಿಶರ್ ಗಾಗಿ ಜಾಹೀರಾತು ನಿಡಿರುವ ವೀಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಮೂಲಕ ಮತ್ತೆ ರಶ್ಮಿಕಾ ಮಂದಣ್ಣ ಅವರು ಟ್ರೋಲ್ ಆಗಿದ್ದಾರೆ.