ನಟ ಶಿವರಾಜಕುಮಾರ್ ಅವರ ಮುಂದಿನ ಸಿನಿಮಾ ಇದು! ಯಾವ ಪಾತ್ರಮಾಡಲಿದ್ದಾರೆ ಗೊತ್ತೆ ?

By Infoflick Correspondent

Updated:Thursday, May 19, 2022, 17:42[IST]

ನಟ ಶಿವರಾಜಕುಮಾರ್ ಅವರ ಮುಂದಿನ ಸಿನಿಮಾ ಇದು! ಯಾವ ಪಾತ್ರಮಾಡಲಿದ್ದಾರೆ ಗೊತ್ತೆ ?

ಶಿವರಾಜಕುಮಾರ್ ಮುಂದಿನ ಸಿನಿಮಾ ಹೇಗಿರಲಿದೆ? ಯಾವ ಸ್ಟಾರ್ ಆಕ್ಷನ್ ಕಟ್ ಹೇಳ್ತಾರೆ? ಯಾವ ಜಾನರಿನ ಸಿನಿಮಾ ಮಾಡಲಿದ್ದಾರೆ? ಅನ್ನೋ ಪ್ರಶ್ನೆ ಚಿತ್ರರಸಿಕರ ಮನದಲ್ಲಿತ್ತು. ಇದೀಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ.  

ಶಿವಣ್ಣನಿಗೆ ಅವನೇ ಶ್ರೀಮನ್ನಾರಾಯಣ ಸಿನಿಮಾ ನಿರ್ದೇಶಕ ಸಚಿನ್ ನಿರ್ದೇಶನ ಮಾಡಲಿದ್ದಾರೆ.‌
ಸಚಿನ್ ರವಿ ನಿರ್ದೇಶನ ಮಾಡಲಿರುವ ಮುಂದಿನ ಸಿನಿಮಾದಲ್ಲಿ ಶಿವಣ್ಣ ಮಹಾಭಾರತದ ಅಶ್ವತ್ಥಾಮನಾಗಿ ಬಣ್ಣ ಹಚ್ಚಲಿದ್ದು, ಇದೊಂದು ಆಕ್ಷನ್ ಪ್ಯಾಕ್ಡ್ ಸ್ಪೈ ಥ್ರಿಲ್ಲರ್ ಕಥಾಹಂದರವನ್ನು ಒಳಗೊಂಡಿದೆ.   

ಸಚಿನ್ ಈ ಸಿನಿಮಾಗೆ ನಿರ್ದೇಶನದ ಜೊತೆಗೆ ನಿರ್ಮಾಣ ಜವಾಬ್ದಾರಿ ಕೂಡ ಹೊತ್ತಿದ್ದು, ತಮ್ಮದೇ ಹೋಮ್ ಬ್ಯಾನರ್ ಜೊತೆಗೆ ಕಾರ್ಪೊರೇಟ್ ಕಂಪೆನಿಯೊಂದರ ಜೊತೆಗೂಡಿ ಸಿನಿಮಾ ನಿರ್ಮಾಣ ಮಾಡಲಿದ್ದಾರೆ. ಕನ್ನಡದ ಮಟ್ಟಿಗೆ ಸೂಪರ್ ಹೀರೋ ಕನ್ಸೆಪ್ಟ್ ನ ಮೊದಲ ಸಿನಿಮಾ ಇದಾಗಿದೆ. 

ಅಮರತ್ವ ಪಡೆದಿರುವ ಅಶ್ವತ್ಥಾಮನ ಸುತ್ತಾ ಸಾಗುವ ಇಡೀ ಕಥೆಯಲ್ಲಿ ಶಿವಣ್ಣ ಸೂಪರ್ ಹೀರೋ ಆಗಿ ಕಾಣಿಸಿಕೊಳ್ಳಲಿದ್ದಾರೆ.  ಸ್ಪೈ ಥ್ರಿಲ್ಲರ್ ಕಥೆಯೊಂದನ್ನು ಸಿನಿಮಾ ಮಾಡುತ್ತಿದ್ದು, ಈ ಚಿತ್ರಕ್ಕೆ ಶಿವರಾಜ್ ಕುಮಾರ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇದೊಂದು ಪಕ್ಕಾ ಆಕ್ಷನ್ ಸಿನಿಮಾವಾಗಿರಲಿದೆ ಎಂದಿದ್ದಾರೆ ಸಚಿನ್.
ಈ ಚಿತ್ರದಲ್ಲಿ ಶಿವಣ್ಣ ಹಿಂದೆಂದೂ ಕಾಣದ ರೀತಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸೆಪ್ಟಂಬರ್ ನಿಂದ ಶೂಟಿಂಗ್ ಶುರುವಾಗಲಿದೆ. ಸದ್ಯದಲ್ಲಿಯೇ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಿನಿಮಾ ತಂಡ ನೀಡಲಿದೆ. 

ಸದ್ಯ ಶಿವರಾಜ್ ಕುಮಾರ್ ವೇದ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದರೆ, ಈ ಸಿನಿಮಾದ ಶೂಟಿಂಗ್ ಮುಗಿಯುತ್ತಿದ್ದಂತೆಯೇ ಯೋಗರಾಜ್ ಭಟ್ ನಿರ್ದೇಶನದ ಚಿತ್ರದಲ್ಲಿ ಶಿವಣ್ಣ ನಟಿಸಲಿದ್ದಾರೆ. ಈ ಮಧ್ಯೆ ಸಚಿನ್ ಅವರ ಸಿನಿಮಾಗೂ ಡೇಟ್ಸ್ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ಅಂದುಕೊಂಡಂತೆ ಆದರೆ, ಸೆಪ್ಟಂಬರ್ ಹೊತ್ತಿಗೆ ಸಚಿನ್ ಸಿನಿಮಾ ಸೆಟ್ಟೇರಲಿದೆ.