Shivraj kumar : ಸಹಸ್ರಲಿಂಗಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಭೇಟಿ ಏಕೆ ಗೊತ್ತೆ ?
Updated:Sunday, May 29, 2022, 08:14[IST]

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ 25 ವರ್ಷಗಳ ಬಳಿಕ ಉತ್ತರ ಕನ್ನಡ ಜಿಲ್ಲೆಯ ಸಹಸ್ರಲಿಂಗ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪತ್ನಿ ಗೀತಾ ಶಿವರಾಜ್ ಕುಮಾರ್ ಜೊತೆ ದೇವಾಲಯಕ್ಕೆ ಭೇಟಿ ನೀಡಿದ್ದ ಶಿವರಾಜ್ ಕುಮಾರ್ ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದಿದ್ದಾರೆ. ಇದಕ್ಕೂ ಮೊದಲು 25 ವರ್ಷಗಳ ಹಿಂದೆ ನಮ್ಮೂರ ಮಂದಾರ ಹೂವೆ ಸಿನಿಮಾದ ಓ ಒಲವೆ ನಿನಗೆ ಹಾಡಿನ ಚಿತ್ರೀಕರಣಕ್ಕಾಗಿ ಇಲ್ಲಿಗೆ ಶಿವಣ್ಣ ಬಂದಿದ್ದರು. ಅದಾದ ಬಳಿಕ ಇದೇ ಮೊದಲ ಬಾರಿಗೆ ಇಲ್ಲಿಗೆ ಬರುತ್ತಿರುವುದಾಗಿ ಅವರು ಹೇಳಿಕೊಂಡಿದ್ದಾರೆ.
ನಟ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ರವರು ತಮ್ಮ ಖಾಸಗಿ ಕಾರ್ಯಕ್ರಮದ ನಿಮಿತ್ತ ಶಿರಸಿಗೆ ಬಂದಿದ್ದರು. ಶಿರಸಿಯ ಬಳಿ ಇರುವ ಸಹಸ್ರಲಿಂಗ ಸನ್ನಿಧಾನಕ್ಕೆ ಶಿವರಾಜ್ಕುಮಾರ್ ದಂಪತಿ ಭೇಟಿ ಕೊಟ್ಟಿದ್ದಾರೆ. ಇದೀಗ ಸಹಸ್ರಲಿಂಗ ಸನ್ನಿಧಾನಕ್ಕೆ ಭೇಟಿ ಕೊಟ್ಟಿರೋ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಸಾಕಷ್ಟು ಕಿರುತೆರೆಯ ರಿಯಾಲಿಟಿ ಶೋನತ್ತ ಮುಖ ಮಾಡಿರುವ ಶಿವಣ್ಣ, ಸಹೋದರ ಪುನೀತ್ ರಾಜ್ ಕುಮಾರ್ ರವರ ಸಾವಿನ ನೋವಿನಿಂದ ಹೊರಬರಲು ಸಾಲು ಸಾಲು ಸಿನಿಮಾಗಳಲ್ಲಿ ಬ್ಯೂಸಿಯಾಗಿದ್ದಾರೆ..