ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೋಂ ಕ್ವಾರಂಟೈನ್ ? ಗುಮಾನಿ ಎಬ್ಬಿಸಿದ ಅವರ ....

Updated: Tuesday, July 7, 2020, 16:17 [IST]

ಮಾಜಿ ಮುಖ್ಯಮಂತ್ರಿ ಹೋಂ ಕ್ವಾರಂಟೈನ್ ? ಗುಮಾನಿ ಎಬ್ಬಿಸಿದ ಅವರ ....

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೆಚ್ ಡಿ ಕೋಟೆ ರಸ್ತೆಯ ಟಿ ಕಾಟೂರಿನ ಬಳಿ ಇರುವ ಅವರ ತೋಟದ ಮನೆಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಇದು ಸಿದ್ದರಾಮಯ್ಯನವರು ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ ಬ ಗುಮಾನಿಗೆ ಕಾರಣವಾಗಿದೆ ಎನ್ನಲಾಗುತ್ತಿದೆ.

  

Advertisement

ಆದರೆ ಅವರ ಆಪ್ತ ವಲಯ ಇದನ್ನು ಅಲ್ಲಗಳೆದಿದ್ದಾರೆ. ಸಿದ್ದರಾಮಯ್ಯ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ ಎನ್ನುವುದು ಸುಳ್ಳು. ಅವರು ವಿಶ್ರಾಂತಿಗಾಗಿ ಬಂದಿದ್ದಾರೆ. ಕೆಲ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಅವರ ಮಗ ಶಾಸಕ ಯತೀಂದ್ರರವರು ಅಧಿಕಾರಿಗಳ ಸಭೆ ನಡೆಸಿದ್ದಾರೆ. ಸಿದ್ದರಾಮಯ್ಯನವರು ಬುಧವಾರ ಸಂಜೆ ಬೆಂಗಳೂರಿಗೆ ಹೋಗಲಿದ್ದಾರೆ ಎಂದಿದ್ದಾರೆ.

  

ನಿನ್ನೆಯಷ್ಟೇ ಸಂಸದೆ ಹಾಗೂ ಚಿತ್ರನಟಿ ಸುಮಲತಾ ಅಂಬರೀಶ್ ರವರು ಕೋವಿಡ್ ಗೆ ಸೋಂಕಿತರಾಗಿದ್ದು ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಈ ಬಗ್ಗೆ ಅವರೇ ಫೇಸ್ಬುಕ್ ನಲ್ಲಿ ಹೇಳಿಕೊಂಡಿದ್ದಾರೆ.

    

ಪೋಸ್ಟ್ ನಲ್ಲಿ ಏನಿದೆ ?

ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾದೆ.

 

ಇವತ್ತು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೇನೆ.

 

ರೋಗನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇನೆ. ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿಡ್‌ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ. ನಿಮ್ಮ ಹಾರೈಕೆ ಇರಲಿ.