ಬ್ರೇಕಿಂಗ್ ನ್ಯೂಸ್ - ಗೃಹ ಸಚಿವ ಬೊಮ್ಮಾಯಿಗೆ ಕೊರೊನಾ ಸೋಂಕು

Updated: Wednesday, September 16, 2020, 12:18 [IST]

ಬ್ರೇಕಿಂಗ್ ನ್ಯೂಸ್ - ಗೃಹ ಸಚಿವ ಬೊಮ್ಮಾಯಿಗೆ ಕೊರೊನಾ ಸೋಂಕು

ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಅವರೇ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

  

Advertisement

ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ ಸಹ ಸೊಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ.

  

ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ.
ಎಂದು ಟ್ವೀಟ್ ಮಾಡಿದ್ದಾರೆ.

ಸಿಟಿ ರವಿ, ಮುಖ್ಯಮಂತ್ರಿ ಯಡಿಯೂರಪ್ಪ, ಸುಮಲತಾ ಅಂಬರೀಶ್, ರಾಕ್ ಲೈನ್ ವೆಂಕಟೇಶ್ , ಜನಾರ್ದನ ಪೂಜಾರಿ, ರಾಮುಲು ಮುಂತಾದವರಿಗೆ ಕೊರೊನಾ ಸೋಂಕು ತಗುಲಿ ಅವರೆಲ್ಲರೂ ಗುಣಮುಖರಾಗಿದ್ದಾರೆ.