Sudeep : ಡ್ರಿಂಕ್ಸ್ ಮಾಡುವ ಬಗ್ಗೆ ಕಿಚ್ಚ ಸುದೀಪ್ ಏನ್ ಹೇಳಿದ್ದಾರೆ ಗೊತ್ತಾ..?

By Infoflick Correspondent

Updated:Thursday, July 21, 2022, 11:12[IST]

Sudeep :  ಡ್ರಿಂಕ್ಸ್ ಮಾಡುವ ಬಗ್ಗೆ ಕಿಚ್ಚ ಸುದೀಪ್ ಏನ್ ಹೇಳಿದ್ದಾರೆ ಗೊತ್ತಾ..?

ಇನ್ನೇನೂ ಕೆಲವೇ ದಿನಗಳಲ್ಲಿ ವಿಕ್ರಾಂತ್‌ ರೋಣ ತೆರೆ ಮೇಲೆ ಅಪ್ಪಳಿಸಲಿದೆ. ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣ ಸಿನಿಮಾ ನೋಡಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಈ ಹಿನ್ನೆಲೆಯಲ್ಲಿ ಇಡೀ ಚಿತ್ರತಂಡ ಪ್ರಮೋಷನ್‌ ಕೆಲಸಗಳಲ್ಲಿ ಬ್ಯುಸಿಯಾಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಚಿತ್ರದ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ವಿಶ್ವಾದ್ಯಂತ ರಿಲೀಸ್ ಮಾಡಲಿದ್ದಾರೆ. ಈಗಾಗಲೇ ಸಿನಿಮಾದ ಹಾಡುಗಳು ಎಲ್ಲೆಡೆ ಟ್ರೆಂಡ್‌ ಕ್ರಿಯೇಟ್‌ ಮಾಡಿವೆ. 

ಯಾವ ಸೋಷಿಯಲ್‌ ಮೀಡಿಯಾ ತೆರೆದರೂ ರಾ ರಾ ರಕಮ್ಮ ಹಾಡಿನದ್ದೇ ಸದ್ದು. ಬಾಲಿವುಡ್‌, ಟಾಲಿವುಡ್‌ ಸೇರಿದಂತೆ ಭಾರತ ಸಿನಿರಂಗದ ಸೆಲಬ್ರಿಟಿಗಳು ಕೂಡ ವಿಕ್ರಾಂತ್‌ ರೋಣನಿಗೆ ಸಾಥ್‌ ನೀಡಿದ್ದಾರೆ.  3ಡಿಯಲ್ಲಿ ಈ ಚಿತ್ರ ರಿಲೀಸ್‌ ಆಗುತ್ತಿದ್ದು, ಕನ್ನಡದ ಜೊತೆಗೆ, ಹಿಂದಿ, ತಮಿಳು, ತೆಲುಗು ಹಾಗೂ ಇಂಗ್ಲಿಷ್‌ನಲ್ಲಿ ಬಿಡುಗಡೆಯಾಗಲಿದೆ. ಇನ್ನು ಈ ಎಲ್ಲಾ ಭಾಷೆಗಳಲ್ಲೂ ಸುದೀಪ್‌ ಅವರೇ ಡಬ್‌ ಮಾಡಿರುವುದು ಮತ್ತೊಂದು ವಿಶೇಷ. ವಿಕ್ರಾಂತ್ ರೋಣ ಪ್ಯಾನ್ ಇಂಡಿಯಾ ಚಿತ್ರ ಇದಾಗಿದೆ. ಜಾಕ್ವೆಲಿನ್ ಫರ್ನಾಂಡೀಸ್ ಕೂಡ ಈ ಚಿತ್ರದಲ್ಲಿದ್ದು, ರಾ ರಾ ರಕ್ಕಮ್ಮ ಹಾಡಿಗೆ ಹೆಜ್ಜೆ ಹಾಕಿದ್ದಾರೆ.  

ಅನೂಪ್‌ ಭಂಡಾರಿ ನಿರ್ದೇಶಿಸಿದ್ದು, ಜುಲೈ 28ರಂದು ಸಿನಿಮಾ ರಿಲೀಸ್‌ ಆಗಲು ಸಿದ್ಧವಾಗಿದೆ. ಈ ಚಿತ್ರಕ್ಕೆ ಅಲಂಕಾರ್ ಪಾಂಡ್ಯನ್ ಸಹ ನಿರ್ಮಾಪಕರು. ಜಾಕ್ ಮಂಜು ನಿರ್ಮಾಣ ಮಾಡಿದ್ದಾರೆ. ಜೀ ಸ್ಟುಡಿಯೋಸ್ ಕೂಡ ಚಿತ್ರಕ್ಕೆ ಕೈ ಜೋಡಿಸಿದ್ದು, ಕಿಚ್ಚ ಸುದೀಪ್ ಜೊತೆಗೆ ನಿರೂಪ್ ಭಂಡಾರಿ, ನೀತಾ ಅಶೋಕ್, ರವಿಶಂಕರ್ ಗೌಡ ಸೇರಿದಂತೆ ಅಲವರು ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶಿಸಿದ್ದು, ವಿಲಿಯಂ ಡೇವಿಡ್ ಕ್ಯಾಮರಾ ಹಿಡಿದಿದ್ದಾರೆ. ಈ ನಡುವೆ ಸುದೀಪ್‌ ಅವರು ಡ್ರಿಂಕ್ಸ್‌ ಮಾಡುವ ವಿಚಾರವಾಗಿ ಮಾತನಾಡಿದ್ದು, ತಾವು ಹೆಚ್ಚು ಡ್ರಿಂಕ್ಸ್‌ ಮಾಡಲ್ಲ. ಮಾಡಿದರೂ ಹೆಂಗೆಂಗೋ ಆಡುವುದಿಲ್ಲ ಎಂದು ಹೇಳಿದ್ದಾರೆ. ಮತ್ತು ತಮಗೆ ಗೊತ್ತಿರುವರ ಹತ್ತಿರ ಮಾತ್ರ ಡ್ರಿಂಕ್ಸ್ ತೆಗೆದು ಕೊಳ್ಳುತ್ತೇನೆ