ಶೂಟಿಂಗ್ ಮುಗಿಸಿ ಮನೆಗೆ ತೆರಳುತ್ತಿದ್ದ  ಖ್ಯಾತ ಪೋಷಕ ನಟಿ ಸುನೇತ್ರಾಗೆ ರಸ್ತೆ ಅಪಘಾತ ಆಸ್ಪತ್ರೆಗೆ ದಾಖಲು

By Infoflick Correspondent

Updated:Sunday, May 8, 2022, 10:41[IST]

ಶೂಟಿಂಗ್ ಮುಗಿಸಿ ಮನೆಗೆ ತೆರಳುತ್ತಿದ್ದ  ಖ್ಯಾತ ಪೋಷಕ ನಟಿ ಸುನೇತ್ರಾಗೆ ರಸ್ತೆ ಅಪಘಾತ ಆಸ್ಪತ್ರೆಗೆ ದಾಖಲು

ಶೂಟಿಂಗ್ ಮುಗಿಸಿ ಮನೆಗೆ ತೆರಳುತ್ತಿದ್ದ ಚಂದನವನದ ಪೋಷಕ ನಟಿ ಸುನೇತ್ರಾ ಅಪಘಾತಕ್ಕೀಡಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದ ರಭಸಕ್ಕೆ ನಟಿ ಸುನೇತ್ರಾ ತಲೆಗೆ ಪೆಟ್ಟು ಬಿದ್ದು ರಕ್ತಸ್ರಾವವಾಗಿದ್ದು, ಕೂಡಲೇ ಸಹಾಯಕ್ಕೆ ಧಾವಿಸಿದ ಸ್ಥಳೀಯರಿಂದ ಗಾಯಾಳು ಸುನೇತ್ರರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸುನೇತ್ರರವರು ತಡರಾತ್ರಿ ಶೂಟಿಂಗ್ ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಎನ್ ಆರ್ ಕಾಲೋನಿ 9 ನೇ ಅಡ್ಡ ರಸ್ತೆಯಲ್ಲಿ ದ್ವಿಚಕ್ರ ವಾಹನ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿನ ಅವೈಜ್ಞಾನಿಕ ಹಂಪ್ ಮತ್ತು ರಸ್ತೆಗುಂಡಿಯಿಂದಾಗಿ ಅಪಘಾತ ಸಂಭವಿಸಿದ್ದು, ಬಸವನಗುಡಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.

ಸಿಲ್ಲಿ ಲಲ್ಲಿ' ಧಾರಾವಾಹಿಯ ವಿಶಾಲು ಪಾತ್ರದ ಮೂಲಕ ಹೆಸರುವಾಸಿಯಾದ ಇವರು ಕಿರುತೆರೆಯಲ್ಲಿಯೇ ಹೆಚ್ಚಾಗಿ ಕಾಣಿಸಿಕೊಳ್ಳುವ ಸುನೇತ್ರ ಪಂಡಿತ್ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಸದ್ಯ ಸ್ಟಾರ್ ಸುವರ್ಣದಲ್ಲಿ ಪ್ರಸಾರ ಆಗುವ 'ಬೆಟ್ಟದ ಹೂ' ಧಾರಾವಾಹಿಯಲ್ಲೂ ನಟಿಸುತ್ತಿದ್ದಾರೆ.