Chiyaan Vikram : ತಮಿಳಿನ ಖ್ಯಾತ ನಟ ವಿಕ್ರಮ್ ಅವರಿಗೆ ಹೃದಯಾಘಾತ? ನಿಜವಾಗಿ ಆದದ್ದು ಏನು

By Infoflick Correspondent

Updated:Friday, July 8, 2022, 19:30[IST]

Chiyaan Vikram : ತಮಿಳಿನ ಖ್ಯಾತ ನಟ ವಿಕ್ರಮ್ ಅವರಿಗೆ ಹೃದಯಾಘಾತ?  ನಿಜವಾಗಿ ಆದದ್ದು ಏನು

ತಮಿಳಿನ ಖ್ಯಾತ ಹೀರೋ ವಿಕ್ರಮ್ ಹೃದಯಾಘಾತ ದಿಂದ ಚೆನ್ನೈ  ನ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಸದ್ಯದ ಸ್ಥಿತಿ ಇನ್ನಷ್ಟೇ ತಿಳಿಯಬೇಕಿದೆ. ತಮ್ಮ ನೆಚ್ಚಿನ ನಟ ಹೃದಯಾಘಾತ  ದಿಂದ ಆಸ್ಪತ್ರೆ ಸೇರಿರುವುದರಿಂದ ಅಭಿಮಾನಿಗಳು ಆತಂಕಗೊಂಡಿದ್ದಾರೆ.

56 ವರ್ಷದ ವಿಕ್ರಮ್​ ನಿನ್ನೆ ಸಂಜೆ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರ ಕುಟುಂಬಸ್ಥರು ಆಸ್ಪತ್ರೆಗೆ ದಅಖಲಿಸಿದ್ದರು. ವೈದ್ಯರು ಚಿಯಾನ್ ವಿಕ್ರಮ್ ಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇಂದು ಸಂಜೆ 6 ಗಂಟೆಗೆ ವಿಕ್ರಂ ತಮ್ಮ ಚಿತ್ರ ಪೊನ್ನಿಯಿನ್ ಸೆಲ್ವನ್ ನ ಟ್ರೇಲರ್ ಲಾಂಚ್ ಮಾಡಬೇಕಿತ್ತು. 

ವಿಕ್ರಮ್ ಮ್ಯಾನೇಜರ್ ಸೂರ್ಯ ನಾರಾಯಣ ಅವರು ಟ್ವಿಟರ್​ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. 'ವಿಕ್ರಮ್​ ಅವರಿಗೆ ಚೆಸ್ಟ್ ಡಿಸ್‌ಕಂಫರ್ಟ್ ಆಗಿತ್ತು ಅಷ್ಟೇ. ಹಾರ್ಟ್​​ಅಟ್ಯಾಕ್ ಆಗಿದೆ ಅನ್ನೋದು ಸುಳ್ಳು ಸುದ್ದಿ. ಸದ್ಯ ವಿಕ್ರಮ್ ಆರೋಗ್ಯ ಸ್ಥಿರವಾಗಿದೆ. ಒಂದು ದಿನದಲ್ಲಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ' ಎಂದು ಸೂರ್ಯ ನಾರಾಯಣ ಅವರು ಮಾಹಿತಿ ನೀಡಿದ್ದಾರೆ. ಇಂದು ಸಂಜೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ‍್ಯತೆಯಿದೆ ಎನ್ನಲಾಗಿದೆ.

ನಟ ವಿಕ್ರಮ್ ಸ್ಯಾಂಡಲ್​ವುಡ್​ನ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಅವರ ಆಪ್ತ ಸ್ನೇಹಿತರಾಗಿದ್ದಾರೆ. ಅಲ್ಲದೇ ಇವರಿಗೆ ಕರ್ನಾಟಕದಲ್ಲಿಯೂ ಕೋಟ್ಯಾಂತರ ಅಭಿಮಾನಿಗಳಿದ್ದಾರೆ.

ವಿಕ್ರಮ್ ಅಥವಾ ಚಿಯಾನ್ ವಿಕ್ರಮ್ ಎಂದೇ ಜನಪ್ರಿಯರಾಗಿರುವ ನಟನ ಅಸಲಿ ಹೆಸರು ಕೆನಡಿ ಜಾನ್ ವಿಕ್ಟರ್. ತಮಿಳು ಚಿತ್ರರಂಗದಲ್ಲಿ ಹಲವು ಏಳುಬೀಳು ಕಂಡಿರುವ ವಿಕ್ರಮ್ ಏಳು ಫಿಲಂಫೇರ್ ಪ್ರಶಸ್ತಿ ಪಡೆದಿದ್ದು, ಗಾಯಕರಾಗಿ ಕೂಡಾ ಹೆಸರುವಾಸಿಯಾಗಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ನಟ ವಿಕ್ರಮ್ ಹಲವು ಬಾರಿ ತಮಿಳುನಾಡು ಸರ್ಕಾರದ ರಾಜ್ಯ ಪ್ರಶಸ್ತಿ ಗಳಿಸಿದ್ದಾರೆ. 2011ರಲ್ಲಿ ಪೀಪಲ್ಸ್ ಯೂನಿವರ್ಸಿಟಿ ಆಫ್ ಮಿಲನ್ ಗೌರವ ಡಾಕ್ಟರೇಟ್ ಪಡೆದಿದ್ದಾರೆ.

ವಿಶ್ವಸಂಸ್ಥೆಯ ಮಾನವ ವಸಾಹತು ಕಾರ್ಯಕ್ರಮದ ಯುವ ರಾಯಭಾರಿಯಾಗಿ ಕಾಣಿಸಿಕೊಂಡಿದ್ದಾರೆ. ಅವರು ಸಂಜೀವನಿ ಟ್ರಸ್ಟ್‌ನ ಬ್ರಾಂಡ್ ಅಂಬಾಸಿಡರ್ ವಿಕ್ರಮ್ ಫೌಂಡೇಶನ್ ಮೂಲಕ ತನ್ನದೇ ಆದ ಕಲ್ಯಾಣ ಸಂಘವನ್ನು ನಡೆಸುತ್ತಿದ್ದಾರೆ. 2015ರಲ್ಲಿ ದಕ್ಷಿಣ ಭಾರತದ ಪ್ರವಾಹದ ನಂತರ ನಗರದ ಸ್ವಯಂಸೇವಕರಿಗೆ ಗೌರವ ಸೂಚಕವಾಗಿ ಅವರು 2016ರಲ್ಲಿ ಸ್ಪಿರಿಟ್ ಆಫ್ ಚೆನ್ನೈನ ಪ್ರವಾಹ ಪರಿಹಾರ ಗೀತೆಯಾದ ವೀಡಿಯೊವನ್ನು ನಿರ್ಮಿಸಿ ನಿರ್ದೇಶಿಸಿದರು.