Karnataka Rains : ಮಳೆ ಹಿನ್ನೆಲೆ ಹಲವು ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲೆಗಳು..?? ಯಾವುದು ನೋಡಿ

By Infoflick Correspondent

Updated:Wednesday, August 3, 2022, 21:51[IST]

Karnataka Rains : ಮಳೆ ಹಿನ್ನೆಲೆ ಹಲವು ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲೆಗಳು..??  ಯಾವುದು ನೋಡಿ

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗುತ್ತಿದೆ. ಹಾಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕಡಬ ಮತ್ತು ಸುಳ್ಯ ತಾಲೂಕುಗಳಲ್ಲಿ ಶಾಲೆ  ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಳೆದ ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಹಲವಡೆ ತಗ್ಗು ಪ್ರದೇಶಗಳಲ್ಲಿ ಜಲಾವೃತವಾಗುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಭಾರಿ ಮಳೆಯಿಂದಾಗಿ ಸುಳ್ಯ ಮತ್ತು ಕಡಬದ ಎರಡೂ ತಾಲ್ಲೂಕುಗಳಲ್ಲಿ ಅನೇಕ ಕಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇದರಿಂದ ಜನರಿಗೆ ಸಂಚಾರಕ್ಕೆ ತೊಂದರೆಯಾಗಿದೆ. ರಸ್ತೆ ಹಾಗೂ ಮನೆಗಳ ಮೇಲೆ ನೀರು ನುಗ್ಗಿದೆ.  ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು,  ಕಳೆದ ಕೆಲ ದಿನಗಳಿಂದ ರಾಜಧಾನಿ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದೆ. ವಾರದಿಂದಲೂ ರಾಜ್ಯದ ವಿವಿಧೆಡೆ ವರುಣನ ಆರ್ಭಟ ಜೋರಾಗಿದೆ. ಕರಾವಳಿ ಹಾಗೂ ಮಲೆನಾಡಿನ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದಲ್ಲಿ ಇನ್ನೂ ಮೂರು ದಿನ ಅಧಿಕ ಮಳೆಯಾಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ನಾಳೆಯೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನು, ಮಲೆನಾಡು ಜಿಲ್ಲೆಗಳಲ್ಲಿಯೂ ಸಹ ಮಳೆಯಾಗಲಿದೆ. ಅದೇ ರೀತಿ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಇನ್ನೂ 3 ದಿನ ಮಳೆಯ ಆರ್ಭಟ ಮುಂದುವರೆಯಲಿದೆ.

ಕರ್ನಾಟಕದ ಬಹುತೇಕ ಕಡೆ ಮಳೆಯ ಅಬ್ಬರ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮಳೆ ಹೆಚ್ಚಾಗಲಿದ್ದು, ಕರ್ನಾಟಕದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.