ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡ ಬಿಗ್ಬಾಸ್ ಖ್ಯಾತಿಯ ರಂಜಿತ್ : ಹುಡುಗಿ ಯಾರು ನೋಡಿ ?

ಬಿಗ್ಬಾಸ್ ಸೀಸನ್ 11ಕ್ಕೆ ಕೊನೆಯ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದ ರಂಜಿತ್ ಅವರು ಪ್ರೀತಿಸಿದ ಹುಡುಗಿ ಜೊತೆಗೆ ಎಂಗೇಜ್ ಆಗಿದ್ದಾರೆ. ರಂಜಿತ್ ಅವರು ನಿಶ್ಚಿತಾರ್ಥ ಮಾಡಿಕೊಂಡಿರೋ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.ಇನ್ನೂ, ರಂಜಿತ್ ಅವರು ಪ್ರೀತಿಸಿದ ಹುಡುಗಿ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡು ಅಭಿಮಾನಿಗಳಿಗೆ ಸರ್ಪ್ರೈಸ್ ಕೊಟ್ಟಿದ್ದಾರೆ. ರಂಜಿತ್ ಅವರು ನಿಶ್ಚಿತಾರ್ಥ ಮಾಡಿಕೊಂಡ ಹುಡುಗಿಯ ಹೆಸರು ಮಾನಸಾ ಗೌಡ. ಇವರು ಫ್ಯಾಷನ್ ಡಿಸೈನರ್ ಆಗಿದ್ದಾರೆ. ಹಾಗೂ ಸೋಷಿಯಲ್ ಮೀಡಿಯಾದಲ್ಲೂ ಸಖತ್ ಆ್ಯಕ್ಟವ್ ಆಗಿರುವ ಮಾನಸ ಗೌಡ, ಕಂಟೆಂಟ್ ಕ್ರಿಯೇಟರ್ ಕೂಡ ಆಗಿದ್ದಾರೆ.
ನಟ ರಂಜಿತ್ ಹಾಗೂ ಮಾನಸಾ ಗೌಡ ಅವರ ನಿಶ್ಚಿತಾರ್ಥಕ್ಕೆ ಬಿಗ್ಬಾಸ್ ಸ್ಪರ್ಧಿಗಳು ಕೂಡ ಆಗಮಿಸಿದ್ದರು. ಮೋಕ್ಷಿತಾ ಪೈ, ಐಶ್ವರ್ಯ ಸಿಂಧೋಗಿ, ಶಿಶಿರ್ ಶಾಸ್ತ್ರಿ, ಅನುಷಾ ರೈ ಹಾಗೂ ಭವ್ಯಾ ಗೌಡ ಬಂದಿದ್ದರು.
( video credit ; FDFS Kannada )