ಜುಲೈ 1 ರಿಂದಲೇ ಇಂತಹ ಮನೆಗಳಿಗೆ ವಿದ್ಯುತ್ ಸಂಪರ್ಕ ಸಿಗೋಲ್ಲ!! ರಾಜ್ಯ ಸರ್ಕಾರದ ಆದೇಶ!!

ಇತ್ತೀಚೆಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಪ್ರಕಾರ, ಸರ್ಕಾರದ ಅನುಮತಿ ಇಲ್ಲದೆ ನಿರ್ಮಿಸಲಾದ ಮನೆಗಳು ಮತ್ತು ಕಟ್ಟಡಗಳಿಗೆ ಯಾವುದೇ ಕಾರಣಕ್ಕೂ ನೀರು ಮತ್ತು ವಿದ್ಯುತ್ ಸಂಪರ್ಕ ನೀಡಬಾರದು ಎಂಬ ಕಟ್ಟುನಿಟ್ಟಿನ ಆದೇಶ ಹೊರಬಿದ್ದಿದೆ. ಈ ತೀರ್ಪು ದೇಶದಾದ್ಯಂತ ಅನ್ವಯವಾಗಲಿದ್ದು, ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅನೇಕ ಕುಟುಂಬಗಳು ಸರ್ಕಾರದ ಕಟ್ಟಡ ನಕ್ಷೆ ಅನುಮತಿ ಅಥವಾ ಸ್ವಾಧೀನ ಪ್ರಮಾಣಪತ್ರವಿಲ್ಲದೆ ಮನೆಗಳನ್ನು ನಿರ್ಮಿಸಿರುವುದು ಈಗ ನ್ಯಾಯಾಲಯದ ಗಮನಕ್ಕೆ ಬಂದಿದೆ.
ಈ ತೀರ್ಪಿನ ಹಿನ್ನೆಲೆಯಲ್ಲಿ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಯಾರೂ ಕೂಡ ಕಟ್ಟಡ ನಕ್ಷೆ ಅನುಮತಿ ಇಲ್ಲದೆ ಮನೆ ಅಥವಾ ಕಟ್ಟಡವನ್ನು ನಿರ್ಮಿಸಬಾರದು ಎಂದು ಹೇಳಿದ್ದಾರೆ. ಈಗಾಗಲೇ ಸುಮಾರು 2.5 ಲಕ್ಷಕ್ಕೂ ಹೆಚ್ಚು ಮನೆಗಳು ಅನುಮತಿ ಇಲ್ಲದೆ ನಿರ್ಮಾಣವಾಗಿದ್ದು, ಇವುಗಳಿಗೆ ನೀರು ಮತ್ತು ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿಗಳು ಸಲ್ಲಿಸಲಾಗಿದೆ. ಆದರೆ, ಸುಪ್ರೀಂ ಕೋರ್ಟ್ ಈ ಅರ್ಜಿಗಳನ್ನು ತಿರಸ್ಕರಿಸಿ, ಯಾವುದೇ ಸೌಲಭ್ಯ ನೀಡಬಾರದು ಎಂದು ಸ್ಪಷ್ಟವಾಗಿ ಹೇಳಿದೆ.
ಇದರಿಂದಾಗಿ, ಇನ್ನು ಮುಂದೆ ಮನೆ ಅಥವಾ ಕಟ್ಟಡ ನಿರ್ಮಿಸಲು ಯೋಜಿಸುತ್ತಿರುವವರು ಕಟ್ಟಡ ನಕ್ಷೆ ಅನುಮತಿ ಮತ್ತು ಸ್ವಾಧೀನ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಇಲ್ಲದಿದ್ದರೆ, ಭವಿಷ್ಯದಲ್ಲಿ ಕಾನೂನು ಸಮಸ್ಯೆಗಳಿಗೆ ಒಳಗಾಗುವ ಸಾಧ್ಯತೆ ಹೆಚ್ಚಾಗುತ್ತದೆ. ಸರ್ಕಾರ ಕೂಡ ಈ ತೀರ್ಪನ್ನು ಅನುಸರಿಸಲು ಬದ್ಧವಾಗಿದ್ದು, ಸಾರ್ವಜನಿಕರಿಗೆ ತೊಂದರೆ ಆಗದಂತೆ ಪರಿಹಾರ ಮಾರ್ಗಗಳ ಬಗ್ಗೆ ಚರ್ಚೆ ನಡೆಸುತ್ತಿದೆ.
ಸ್ನೇಹಿತರೆ, ಈ ತೀರ್ಪು ನಿಮ್ಮ ಮನೆ ನಿರ್ಮಾಣದ ಯೋಜನೆಗೆ ಸಂಬಂಧಿಸಿದಂತೆ ಬಹುಮುಖ್ಯವಾಗಿದೆ. ದಯವಿಟ್ಟು ಈ ಮಾಹಿತಿಯನ್ನು ಗಂಭೀರವಾಗಿ ಪರಿಗಣಿಸಿ ಮತ್ತು ನಿಮ್ಮ ಸ್ನೇಹಿತರು, ಕುಟುಂಬದವರೊಂದಿಗೆ ಹಂಚಿಕೊಳ್ಳಿ. ನಿಮ್ಮ ಅಭಿಪ್ರಾಯಗಳನ್ನು ಕಮೆಂಟ್ ಬಾಕ್ಸ್‌ನಲ್ಲಿ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನ ಲೈಕ್ ಮಾಡಿ, ಶೇರ್ ಮಾಡಿ. ನಿಮ್ಮ ಜಾಗೃತಿ ಇತರರಿಗೂ ಮಾರ್ಗದರ್ಶನವಾಗಲಿ.