ಚಿನ್ನದ ಬೆಲೆ ಇಳಿಸುವ ಬಗ್ಗೆ RBI ಇಂದ ಹೊಸ ನಿರ್ಧಾರ! ಗ್ರಾಹಕರು ಫುಲ್ ಕುಶ್

ಸ್ನೇಹಿತರೆ, ನಮಸ್ಕಾರ. ಕಳೆದ ಎರಡು ವರ್ಷಗಳಲ್ಲಿ ಚಿನ್ನದ ಬೆಲೆ ಶೇಕಡಾ 80% ಏರಿಕೆಯಾಗಿದೆ ಎಂಬುದು ಎಲ್ಲರಿಗೂ ತಿಳಿದ ವಿಷಯ. ಸದ್ಯ 24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹12,000 ಗಡಿದಾಟಿರುವುದು ಕೂಡ ಗಮನಾರ್ಹ. ದಿನದಿಂದ ದಿನಕ್ಕೆ ಚಿನ್ನದ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಮಹತ್ವದ ತೀರ್ಮಾನವೊಂದನ್ನು ತೆಗೆದುಕೊಂಡಿದೆ.
ಚಿನ್ನದ ಬೆಲೆಗೆ ಸಂಬಂಧಿಸಿದಂತೆ ರಿಸರ್ವ್ ಬ್ಯಾಂಕ್ ಚಿನ್ನ ಖರೀದಿಸುವವರಿಗೆ ಉತ್ತಮ ಸುದ್ದಿ ನೀಡಿದೆ. ಈ ತೀರ್ಮಾನದ ಸಂಪೂರ್ಣ ವಿವರವನ್ನು ಒಂದು ಮಾಹಿತಿ ಪೂರ್ಣವಾದ ವಿಡಿಯೋದಲ್ಲಿ ನೀಡಲಾಗಿದೆ. ವಿಡಿಯೋವನ್ನು ಸಂಪೂರ್ಣವಾಗಿ ನೋಡಿ ಮತ್ತು ಚಿನ್ನ ಖರೀದಿಸುವ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಹಂಚಿಕೊಳ್ಳಿ.
ಭಾರತವು ಸಾಮಾನ್ಯವಾಗಿ ಹೆಚ್ಚಿನ ಪ್ರಮಾಣದಲ್ಲಿ ಚಿನ್ನವನ್ನು ಆಮದು ಮಾಡಿಕೊಳ್ಳುವ ದೇಶವಾಗಿದೆ. ಈ ಕ್ಷೇತ್ರದಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಬೇರೆ ದೇಶಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಚಿನ್ನವನ್ನು ಆಮದು ಮಾಡಿಕೊಳ್ಳುವ ಕಾರಣದಿಂದಾಗಿ ದೇಶದಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಏರಿಕೆಯಾಗಿದೆ.
ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ರಿಸರ್ವ್ ಬ್ಯಾಂಕ್ ಇತ್ತೀಚೆಗೆ ಮಹತ್ವದ ತೀರ್ಮಾನವೊಂದನ್ನು ತೆಗೆದುಕೊಂಡಿದೆ. ಈ ತೀರ್ಮಾನದಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಏರಿಕೆಯಾಗದಂತೆ ನಿಯಂತ್ರಣಕ್ಕೆ ತರಲು ಸಾಧ್ಯವಾಗುತ್ತದೆ. ರಿಸರ್ವ್ ಬ್ಯಾಂಕ್ ಈಗ ಸುಮಾರು 100 ಬಿಲಿಯನ್ ಡಾಲರ್ ಮೌಲ್ಯದ ಚಿನ್ನವನ್ನು ಸಂಗ್ರಹ ಮಾಡಿದೆ.
ಜನರ ಆರ್ಥಿಕ ಸ್ಥಿತಿಗತಿ ಮತ್ತು ದೇಶದ ಆರ್ಥಿಕ ಸ್ಥಿರತೆಯನ್ನು ಕಾಪಾಡುವ ಉದ್ದೇಶದಿಂದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಚಿನ್ನವನ್ನು ಸಂಗ್ರಹಿಸಲಾಗಿದೆ. ದೇಶದ ಗ್ರಾಹಕರು ನಿರಂತರವಾಗಿ ಚಿನ್ನವನ್ನು ಖರೀದಿಸುತ್ತಿರುವುದು ಕೂಡ ಈ ತೀರ್ಮಾನಕ್ಕೆ ಕಾರಣವಾಗಿದೆ.
ಜಾಗತಿಕ ಮಟ್ಟದಲ್ಲಿ ಚಿನ್ನದ ಬೆಲೆ ಏರಿಕೆಯಾಗುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಚಿನ್ನಕ್ಕೆ ಇನ್ನಷ್ಟು ಬೇಡಿಕೆ ಹೆಚ್ಚಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಮತ್ತಷ್ಟು ಏರಿಕೆಯಾಗದಂತೆ ತಡೆಯಲು ರಿಸರ್ವ್ ಬ್ಯಾಂಕ್ ಈ ಕ್ರಮ ಕೈಗೊಂಡಿದೆ. ಇದರ ಪರಿಣಾಮವಾಗಿ ಭಾರತದ ಆರ್ಥಿಕ ಸ್ಥಿತಿ ಇನ್ನಷ್ಟು ಬಲಿಷ್ಠವಾಗಲಿದೆ.
ಚಿನ್ನದ ಬೆಲೆ ಏರಿಕೆಯಿಂದ ಡಾಲರ್‌ನ ಮೌಲ್ಯ ಕೂಡ ಏರಿಕೆಯಾಗುತ್ತಿದೆ. ಈ ಎಲ್ಲ ಕಾರಣಗಳಿಂದ ಭಾರತೀಯ ರಿಸರ್ವ್ ಬ್ಯಾಂಕ್ ಈ ತೀರ್ಮಾನವನ್ನು ತೆಗೆದುಕೊಂಡಿದ್ದು, ಇನ್ನು ಮುಂದೆ ಭಾರತದಲ್ಲಿ ಚಿನ್ನದ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ.