ಕೇಂದ್ರ ಸರ್ಕಾರದಿಂದ ಎಲ್‌ಪಿಜಿ ಬೆಲೆಯಲ್ಲಿ ಭಾರಿ ಇಳಿಕೆ

ಕೇಂದ್ರ ಸರ್ಕಾರದಿಂದ ಎಲ್‌ಪಿಜಿ ಬೆಲೆಯಲ್ಲಿ ಭಾರಿ ಇಳಿಕೆ

ಲೋಕಸಭೆ ಚುನಾವಣೆಗೆ ಮುನ್ನ ಕೇಂದ್ರ ಸರ್ಕಾರವು ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು 100 ರೂಪಾಯಿ ಕಡಿತಗೊಳಿಸಿದೆ. ಮಹಿಳಾ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಈ ಸುದ್ದಿಯನ್ನು ಪ್ರಕಟಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, "ಇಂದು, ಮಹಿಳಾ ದಿನದಂದು, ನಮ್ಮ ಸರ್ಕಾರವು ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 100 ರೂ.ಗಳಷ್ಟು ಕಡಿಮೆ ಮಾಡಲು ನಿರ್ಧರಿಸಿದೆ. ಇದು ದೇಶಾದ್ಯಂತ ಲಕ್ಷಾಂತರ ಕುಟುಂಬಗಳ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ, ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡುತ್ತದೆ. 

ಅಡುಗೆ ಅನಿಲವನ್ನು ಹೆಚ್ಚು ಕೈಗೆಟುಕುವಂತೆ ಮಾಡುವ ಮೂಲಕ, ನಾವು ಕುಟುಂಬಗಳ ಯೋಗಕ್ಷೇಮವನ್ನು ಬೆಂಬಲಿಸಲು ಮತ್ತು ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ಗುರಿಯನ್ನು ಹೊಂದಿದ್ದೇವೆ. ಇದು ಮಹಿಳೆಯರ ಸಬಲೀಕರಣ ಮತ್ತು ಅವರಿಗೆ 'ಸುಲಭವಾಗಿ ಬದುಕಲು' ಖಾತ್ರಿಪಡಿಸುವ ನಮ್ಮ ಬದ್ಧತೆಗೆ ಅನುಗುಣವಾಗಿದೆ."


ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆಯುವ ಲೋಕಸಭೆ ಚುನಾವಣೆಗೆ ಮುನ್ನವೇ ದೊಡ್ಡ ಘೋಷಣೆ ಹೊರಬಿದ್ದಿದೆ. ಅದಕ್ಕಿಂತ ಮುಖ್ಯವಾಗಿ ಚುನಾವಣಾ ಆಯೋಗ ಮುಂದಿನ ಒಂದು ವಾರದಲ್ಲಿ ದಿನಾಂಕ ಪ್ರಕಟಿಸುವ ನಿರೀಕ್ಷೆಯಿರುವುದರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ಕೇಂದ್ರ ಕತ್ತರಿ ಹಾಕಿದೆ.

PM ಉಜ್ವಲ ಯೋಜನೆಯಲ್ಲಿ ಫಲಾನುಭವಿಗಳಿಗೆ, ಕಳೆದ ವರ್ಷದ ಕಡಿಮೆ ದರವನ್ನು 703 ರೂ.ಗಳಿಗೆ ನಿಗದಿಪಡಿಸಲಾಗಿದೆ. ಮಾರ್ಚ್ 2023 ರಲ್ಲಿ, PM ಉಜ್ವಲ ಯೋಜನೆಯಡಿಯಲ್ಲಿ ಸರ್ಕಾರವು ಪ್ರತಿ LPG ಸಿಲಿಂಡರ್‌ಗೆ ರೂ 200 ಸಬ್ಸಿಡಿಯನ್ನು ವಿಸ್ತರಿಸಿತು.