ನಾವು ಏಕೆ ಬೆಳಗ್ಗೆ ಸ್ನಾನ ಮಾಡಬೇಕು? ಇದನ್ನು ನೋಡಿ!!

Updated: Monday, October 12, 2020, 22:49 [IST]

ಬೇಗ ಏಳು- ಬೇಗ ಮಲಗು ಪದ್ಧತಿ ಈಗಿಲ್ಲ. ರಾತ್ರಿ 12ರ ಮೇಲೆ ನಿದ್ರೆ ಮಾಡುವವರ ಸಂಖ್ಯೆಯೇ ಹೆಚ್ಚು. ಇದರಿಂದಾಗಿ ಬೆಳಿಗ್ಗೆ ಏಳುವುದು ತಡವಾಗುತ್ತದೆ. ಸೂರ್ಯೋದಯಕ್ಕಿಂತ ಮೊದಲ ಸ್ನಾನ ಮಾಡುವವರ ಸಂಖ್ಯೆ ಅತೀ ಕಡಿಮೆ. ಸೂರ್ಯ ನೆತ್ತಿ ಮೇಲೆ ಬಂದರೂ ಕೆಲವರಿಗೆ ಸ್ನಾನ ಆಗಿರುವುದಿಲ್ಲ. ನೀವು ಇಂತವರಲ್ಲಿ ಒಬ್ಬರಾಗಿದ್ದರೆ ಎಚ್ಚರ. 

ನೀವು ಸ್ನಾನ ಮಾಡುವ ಸಮಯ ನಿಮ್ಮ ಸುಖ, ಸಂತೋಷ, ಆರ್ಥಿಕ ವ್ಯವಸ್ಥೆ ಹಾಗೂ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಧರ್ಮಶಾಸ್ತ್ರದಲ್ಲಿ ನಾಲ್ಕು ರೀತಿಯ ಸ್ನಾನವನ್ನು ಹೇಳಲಾಗಿದೆ. 

ಬೆಳಗಿನ ಜಾವ 4 ಗಂಟೆಯಿಂದ ಐದು ಗಂಟೆಯೊಳಗೆ ಮಾಡುವ ಸ್ನಾನವನ್ನು ಮುನಿ ಸ್ನಾನ ಎಂದು ಕರೆಯಲಾಗುತ್ತದೆ. ಇದು ಸ್ನಾನ ಮಾಡಲು ಅತ್ಯುತ್ತಮವಾದ ಸಮಯ. ಮುನಿ ಸ್ನಾನ ಮಾಡುವುದರಿಂದ ಮನೆಯಲ್ಲಿ ಸುಖ-ಶಾಂತಿ, ಸಮೃದ್ಧಿ ನೆಲೆಸುತ್ತದೆಂದು ನಂಬಲಾಗಿದೆ. 

ಬೆಳಿಗ್ಗೆ ಐದು ಗಂಟೆಯಿಂದ ಆರು ಗಂಟೆಯೊಳಗೆ ಸ್ನಾನ  ಮಾಡಿದರೆ ಆಯಸ್ಸು, ಕೀರ್ತಿ, ಧನ, ಸಂತೋಷ ಲಭಿಸುತ್ತದೆ. ಇದನ್ನು ದೇವಿ ಸ್ನಾನ ಎಂದು ಕರೆಯಲಾಗುತ್ತದೆ. ಶಾಸ್ತ್ರಗಳ ಪ್ರಕಾರ ಈ ಸ್ನಾನ ಕೂಡ ಉತ್ತಮವಾದದ್ದು.

ಮೂರನೇ ಸ್ನಾನವನ್ನು ಮನುಷ್ಯ ಸ್ನಾನ ಎಂದು ಕರೆಯಲಾಗುತ್ತದೆ. ಬೆಳಿಗ್ಗೆ 6 ಗಂಟೆಯಿಂದ 8 ಗಂಟೆಯ ಒಳಗೆ ಮಾಡುವ ಸ್ನಾನ ಇದಾಗಿದೆ. ಈ ಸಮಯದಲ್ಲಿ ಸ್ನಾನ ಮಾಡಿದರೆ ಕೆಲಸದಲ್ಲಿ ಯಶಸ್ಸು ಸಿಗುತ್ತದೆ ಎಂದು ನಂಬಲಾಗಿದೆ.

ಕೊನೆಯ ಸ್ನಾನ ರಾಕ್ಷಸಿ ಸ್ನಾನ. ಇದೀಗ ಸಾಮಾನ್ಯವಾಗಿದೆ. 8 ಗಂಟೆ ನಂತರ ಮಾಡುವ ಸ್ನಾನ ಈ ಶ್ರೇಣಿಯಲ್ಲಿ ಬರುತ್ತದೆ. ಇದನ್ನು ಧರ್ಮ ನಿಷೇಧವೆಂದು ಪರಿಗಣಿಸಲಾಗಿದೆ. ಈ ಸ್ನಾನ ಮಾಡುವುದರಿಂದ ಮನೆಯಲ್ಲಿ ಬಡತನ, ಕಲಹ, ಅಶಾಂತಿ, ಅನಾರೋಗ್ಯ ಕಾಡುತ್ತದೆ...

ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಜ್ಞಾನೇಶ್ವರ್ ರಾವ್ ಗುರೂಜಿ 8548998564 ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ , ಜನ ವಶ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 3 ದಿನಗಳಲ್ಲಿ ಸವರ್ಜಯ ಯಾವುದೇ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8548998564