ಶಬರಿಮಲೆಯಲ್ಲಿ ಮಹಿಳೆಯರಿಗೆ ಪ್ರವೇಶವಿಲ್ಲ: ಅಂತೆಯೇ ಈ ದೇವಾಲಯಗಳಿಗೆ ಗಂಡಸರು ಬರುವಂತಿಲ್ಲ.. ವಿಡಿಯೋ ನೋಡಿ

Updated: Monday, April 5, 2021, 13:38 [IST]

ಒಂದು ಕಡೆ ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶವಿಲ್ಲ. ಈ ಪ್ರತೀತಿ ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ. ಸುಪ್ರೀಂ ಕೋರ್ಟ್ ಮಹಿಳೆಯರಿಗೆ ಶಬರಿಮಲೆ ಮುಕ್ತ ಎಂದು ತೀರ್ಪು ನೀಡಿದ್ದರೂ ಪ್ರವೇಶ ಮಾತ್ರ ಇಲ್ಲಿವರೆಗೆ ಸಾಧ್ಯ ಆಗಿಲ್ಲ. ಹೀಗಿರುವಾಗ ಇತ್ತ ಪುರುಷರಿಗೆ ಪ್ರವೇಶವಿಲ್ಲದ ದೇವಾಲಯಗಳೂ ಇವೆ. ಇಂತಹ ದೇವಾಲಯಗಳ ಬಗ್ಗೆಯೂ ನಾವು ತಿಳಿದುಕೊಳ್ಳಬೇಕಿದೆ. 

ಕನ್ಯಾ ಮಾತೆ ಭಗವತಿ ಮಂದಿರ: 
ಈ ಮಂದಿರವು ಕನ್ಯಾಕುಮಾರಿಯಲ್ಲಿದೆ. ಪುರಾಣಗಳ ಪ್ರಕಾರ ಸತಿಯ ಬೆನ್ನುಹುರಿಯು ಈ ದೇವಾಲಯದಲ್ಲಿ ಬೀಳುತ್ತದೆ. ಕನ್ಯಾ ಮಾತೆ ಭಗವತಿ ದುರ್ಗೆಯು ಸಮುದ್ರ ನಡುವೆ ಶಿವನು ತನ್ನ ಪತಿಯಾಗಬೇಕೆಂದು ತಪಸ್ಸನ್ನು ಆಚರಿಸುವರು. ಈ ದೇವಿಯನ್ನು ಸನ್ಯಾಸ ದೇವಿಯೆಂದು ಕರೆಯಲಾಗುತ್ತದೆ. ಈ ಕಾರಣದಿಂದಾಗಿ ಸನ್ಯಾಸಿ ಪುರುಷರಿಗೆ ಮಂದಿರದ ಆವರಣದ ತನಕ ಮಾತ್ರ ಪ್ರವೇಶವಿದೆ. ಆದರೆ ವಿವಾಹಿತ ಪುರುಷರಿಗೆ ಸಂಪೂರ್ಣ ನಿಷೇಧವಿದೆ.    


ಮಾತಾ ಮಂದಿರ: 
ಬಿಹಾರದ ಮುಝಫ್ಫರಪುರದಲ್ಲಿರುವ ಈ ಮಂದಿರಕ್ಕೆ ಕೆಲವು ನಿರ್ದಿಷ್ಟ ದಿನಗಳಂದು ಪುರುಷರಿಗೆ ಪ್ರವೇಶ ನಿರಾಕರಿಸಲಾಗಿದೆ. ಮಂದಿರದ ಒಳಗೆ ಪುರುಷ ಅರ್ಚಕರಿಗೂ ಪ್ರವೇಶವಿಲ್ಲ. ಕೆಲವು ದಿನಗಳಲ್ಲಿ ಮಹಿಳೆಯರಿಗೆ ಮಾತ್ರ ಇಲ್ಲಿಗೆ ಪ್ರವೇಶವಿಲ್ಲ.
ಅಟ್ಟುಕಲ್ ಮಂದಿರ: 
ಕೇರಳದ ಅಟ್ಟುಕಲ್ ಭಗವತಿ ಮಂದಿರದಲ್ಲಿ ಮಹಿಳೆಯರೇ ಪೂಜೆಗಳನ್ನು ನಡೆಸುವರು. ಈ ದೇವಾಲಯದಲ್ಲಿ ಸುಮಾರು ಮೂರು ಮಿಲಿಯನ್ ಮಹಿಳೆಯರು ಸೇರಿ ಪೊಂಗಲ್ ಆಚರಣೆ ಮಾಡಿ ಗಿನ್ನಿಸ್ ದಾಖಲೆಗೆ ಬರೆದಿದ್ದಾರೆ. ಹಬ್ಬದ ವೇಳೆ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇ ಸೇರುವ ಕಾರಣದಿಂದಾಗಿ ಪುರುಷರಿಗೆ ಇಲ್ಲಿ ಪ್ರವೇಶವಿಲ್ಲ.     

ಕಾಮಾಖ್ಯ ದೇವಾಲಯ: 
ಗುಹವಾತಿಯಲ್ಲಿರುವ ಕಾಮಾಖ್ಯ ದೇವಾಲಯದ ರೀತಿಯಲ್ಲೇ ಇದು ಸಹ ಇದೆ. ತಿಂಗಳಿನ ಕೆಲ ದಿನ ಇಲ್ಲಿ ಪುರುಷರಿಗೆ ಪ್ರವೇಶ ನಿಷಿದ್ಧ. ದೇವಿ ತನ್ನ ನಿಸರ್ಗದ ಕ್ರಿಯೆಯಲ್ಲಿ ಇರುತ್ತಾಳೆ ಎಂನ ನಂಬಿಕೆ ಇದ್ದು ಆ ಸಂದರ್ಭದಲ್ಲಿ ಪುರಷರಿಗೆ ಪ್ರವೇಶವಿಲ್ಲ.
ಚಕ್ಕುಲತುಕವು ಮಂದಿರ: 
ಕೇರಳದಲ್ಲಿರುವ ಭಗವತಿ ದೇವಿಯ ದೇವಾಲಯ. ಇಲ್ಲಿ ವಾರ್ಷಿಕವಾಗಿ ನಾರಿ ಪೂಜೆಯನ್ನು ಮಾಡಲಾಗುತ್ತದೆ. ಇಲ್ಲಿ ಪುರುಷ ಅರ್ಚಕರು, ಡಿಸೆಂಬರ್ ಮೊದಲ ವಾರದ ಶುಕ್ರವಾರದಿಂದ 10 ದಿನಗಳ ಕಾಲ ಉಪವಾಸ ಮಾಡುವ ಮಹಿಳಾ ಭಕ್ತರ ಪಾದ ತೊಳೆಯು...     

ಸಾವಿತ್ರಿ ದೇವಾಲಯ: 
ರಾಜಸ್ಥಾನದ ಪುಷ್ಕರ್ ನಲ್ಲಿ ಈ ಮಂದಿರವಿದೆ. ವಿವಾಹಿತ ಪುರುಷರಿಗೆ ಈ ದೇವಾಲಯಕ್ಕೆ ಪ್ರವೇಶ ನಿಷಿದ್ಧ.  ಬ್ರಹ್ಮ ದೇವರು ಪುಷ್ಕರ ಸರೋವರದಲ್ಲಿ ಯಜ್ಞವೊಂದನ್ನು ಆಯೋಜಿಸುವರು. ಆದರೆ ಅವರ ಪತ್ನಿ ಸರಸ್ವತಿ ಇಲ್ಲಿಗೆ ಆಗಮಿಸಲು ವಿಳಂಬ ಮಾಡುವರು. ಇದರಿಂದ ಬ್ರಹ್ಮ ದೇವರು ಗಾಯತ್ರಿ ದೇವಿಯನ್ನು ಮದುವೆಯಾಗುವರು. ಅಲ್ಲದೇ, ವಿಧಿವಿಧಾನಗಳನ್ನು ಪೂರೈಸುವರು. ಇದರಿಂದ ಕೋಪಿತರಾದ ಸರಸ್ವತಿ ದೇವಿಯು ಈ ದೇವಾಲಯಕ್ಕೆ  ವಿವಾಹಿತ ಪುರುಷರು ಪ್ರವೇಶಿಸಬಾರದು ಮತ್ತು ಹಾಗೊಂದು ವೇಳೆ ಪ್ರವೇಶಿಸಿದರೆ ಅವರ ವೈವಾಹಿಕ ಜೀವನದಲ್ಲಿ  ಸಮಸ್ಯೆಗಳು ಕಾಣಿಸಿಕೊಳ್ಳುವುದು ಎಂದು ಶಾಪ ನೀಡಿದ್ದಾಳೆ ಎಂದು ಪುರಾಣ ಹೇಳುತ್ತದೆ.