ನಾಳೆ ಜುಲೈ 23ರಂದು ಶಾಲಾ ಕಾಲೇಜುಗಳಿಗೆ ರಜೆ !! ಎಲ್ಲಿ ನೋಡಿ ?

ನಾಳೆ ಜುಲೈ 23ರಂದು ಶಾಲಾ ಕಾಲೇಜುಗಳಿಗೆ ರಜೆ !! ಎಲ್ಲಿ ನೋಡಿ ?

ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಮಳೆಯ ತೀವ್ರತೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಹಲವು ಜಿಲ್ಲೆಗಳಲ್ಲಿ ಜುಲೈ 23ರಂದು (ಬುಧವಾರ) ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಲು ಸಿದ್ಧತೆ ನಡೆಯುತ್ತಿದೆ. ಹವಾಮಾನ ಇಲಾಖೆ ನೀಡಿರುವ ವರದಿ ಪ್ರಕಾರ, ಮುಂದಿನ ನಾಲ್ಕು ದಿನಗಳಲ್ಲಿ ರಾಜ್ಯದ ಹಲವಾರು ಭಾಗಗಳಲ್ಲಿ ತೀವ್ರ ಮಳೆಯ ಸಾಧ್ಯತೆ ಇದೆ.

ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಸಂಬಂಧಿಸಿದಂತೆ ನಿರ್ಧಾರ ಕೈಗೊಳ್ಳುತ್ತಿರುವ ಜಿಲ್ಲೆಗಳೆಂದರೆ: ಕೋಲಾರ, ಚಿಕ್ಕಬಳ್ಳಾಪುರ, ಬೆಳಗಾವಿ, ಹುಬ್ಬಳ್ಳಿ, ರಾಯಚೂರು, ಕೊಪ್ಪಳ, ಗದಗ, ಬೀದರ್, ಬಳ್ಳಾರಿ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಂಗಳೂರು, ಶಿವಮೊಗ್ಗ, ಕೊಡಗು, ಹಾಸನ, ಮಂಡ್ಯ ಮತ್ತು ಮೈಸೂರು. ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಪರಿಸ್ಥಿತಿ ಪರಿಗಣಿಸಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲು ಚರ್ಚೆ ನಡೆಸುತ್ತಿದ್ದಾರೆ.

ಹವಾಮಾನ ಇಲಾಖೆ ನೀಡಿದ ಇತ್ತೀಚಿನ ಮಾಹಿತಿ ಪ್ರಕಾರ, ಈ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಮಳೆಯ ಆರ್ಭಟ ಮುಂದುವರಿಯುವ ಸಾಧ್ಯತೆ ಇರುವುದರಿಂದ ಈ ತಾತ್ಕಾಲಿಕ ಕ್ರಮವನ್ನು ಕೈಗೊಳ್ಳಲಾಗುತ್ತಿದೆ. ಶಾಲಾ ಮಕ್ಕಳ ಸುರಕ್ಷತೆ ಹಾಗೂ ಅನಾಹುತದ ತಡೆಯುವ ಉದ್ದೇಶದಿಂದ ಈ ನಿರ್ಧಾರ ಪಟ್ಟುಹಾಕಲಾಗುತ್ತಿದೆ.