ದಸರಾ ಹಬ್ಬಕ್ಕೆ ಅನೇಕರ ಬಿಪಿಎಲ್ ಕಾರ್ಡ್ ರದ್ದು ಮಾಡಿದ ಸರ್ಕಾರ !! ನಿಮ್ಮ ಕಾರ್ಡ್ ರದ್ದಾಗಿದಿಯ ನೋಡಿ ?

ಅನ್ನಭಾಗ್ಯ ಯೋಜನೆಯಡಿ ಪಡಿತರ ಪಡೆಯುತ್ತಿರುವ ಪಡಿತರ ಕಾರ್ಡ್‌ಗಳ ಪರಿಷ್ಕರಣೆ ಪ್ರಕ್ರಿಯೆ ಆರಂಭವಾಗಿದೆ. ನೆಲಮಂಗಲ ತಾಲೂಕಿನಲ್ಲಿ ಸುಮಾರು 4000 ಕ್ಕೂ ಹೆಚ್ಚು ಜನರ ಪಡಿತರ ಕಾರ್ಡ್‌ಗಳನ್ನು ರದ್ದುಗೊಳಿಸಲು ಸರ್ಕಾರ ಮುಂದಾಗಿದೆ. ಈ ಕಾರ್ಡ್‌ಗಳನ್ನು ರದ್ದುಗೊಳಿಸಿರುವುದಲ್ಲದೆ, ನ್ಯಾಯಬೆಲೆ ಅಂಗಡಿಗಳ ನೋಟಿಸ್ ಬೋರ್ಡ್‌ನಲ್ಲಿ ಡಿಲೀಟ್ ಮಾಡಲಾದ ವ್ಯಕ್ತಿಗಳ ಹೆಸರಿನ ಪಡಿತರ ವಿವರಗಳನ್ನು ಪ್ರಕಟಿಸಲಾಗಿದೆ.
ನೋಟಿಸ್ ಬೋರ್ಡ್‌ನಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ಕೃಷಿ ಮತ್ತು ಇತರ ಆದಾಯಗಳಿಂದಾಗಿ ಕುಟುಂಬದ ವಾರ್ಷಿಕ ಆದಾಯ ₹1.20 ಲಕ್ಷ ಮೀರಿರುವ ಕಾರಣ, ಪಡಿತರ ರದ್ದುಗೊಳಿಸಲಾಗುತ್ತಿದೆ. ಈ ಬಾರಿ ಕೊನೆಯ ಬಾರಿಗೆ ಪಡಿತರ ನೀಡಲಾಗುತ್ತದೆ ಎಂದು ಸೂಚಿಸಲಾಗಿದೆ. ಮುಂದಿನ ತಿಂಗಳಿಂದ ಪಡಿತರ ನೀಡಲಾಗುವುದಿಲ್ಲ ಎಂಬುದಾಗಿ ಸ್ಪಷ್ಟಪಡಿಸಲಾಗಿದೆ.
ಈ ಪರಿಷ್ಕರಣೆ ಯಾಕೆ ನಡೆಯುತ್ತಿದೆ ಎಂಬುದರ ಹಿಂದೆ ಮಹತ್ವದ ಕಾರಣವಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಮೇಲಿರುವ ಅನರ್ಹ ವ್ಯಕ್ತಿಗಳಿಗೆ ಹೆಚ್ಚಿನ ಪ್ರಮಾಣದ ಬಿಪಿಎಲ್ ಕಾರ್ಡ್‌ಗಳನ್ನು ವಿತರಿಸಲಾಗಿತ್ತು. ವಿಶೇಷವಾಗಿ, ಬಡತನ ಪ್ರಮಾಣ ಕಡಿಮೆ ಇರುವ ಜಿಲ್ಲೆಗಳಲ್ಲಿ ಹೆಚ್ಚು ಕಾರ್ಡ್‌ಗಳ ಹಂಚಿಕೆ ಆಗಿದ್ದು, ಜಿಲ್ಲಾವಾರು ಬಡವರ ಸಂಖ್ಯೆಗೆ ಹತ್ತಾರು ಪಟ್ಟು ಹೆಚ್ಚು ಕಾರ್ಡ್‌ಗಳ ವಿತರಣೆಯಾಗಿತ್ತು. ಈ ಕಾರಣದಿಂದಾಗಿ ಸರ್ಕಾರ ಗ್ಯಾರಂಟಿ ಜಾರಿ ಮಾಡುವಲ್ಲಿ ಕಂಗೆಟ್ಟಿತ್ತು ಮತ್ತು ಬಿಪಿಎಲ್ ಕಾರ್ಡ್‌ಗಳ ಪರಿಷ್ಕರಣೆಗೆ ಮುಂದಾಗಿದೆ.
ಬಡತನ ಪ್ರಮಾಣ ಶೇ.1 ರಿಂದ 5 ಇರುವ ಜಿಲ್ಲೆಗಳಲ್ಲಿ 80% ಗಿಂತಲೂ ಅಧಿಕ ಬಿಪಿಎಲ್ ಕಾರ್ಡ್‌ಗಳ ಹಂಚಿಕೆ ಆಗಿರುವುದು ಸರ್ಕಾರಕ್ಕೆ ಆರ್ಥಿಕ ಹೊಡೆತ ನೀಡಿದೆ. ಅನರ್ಹರ ಬಳಿ ಬಿಪಿಎಲ್ ಕಾರ್ಡ್‌ಗಳು ಇರುವುದರಿಂದ ಆಹಾರ ಇಲಾಖೆ ಈ ಕಾರ್ಡ್‌ಗಳನ್ನು ರದ್ದುಗೊಳಿಸಲು ಅಭಿಯಾನ ಆರಂಭಿಸಿದೆ. ಗ್ಯಾರಂಟಿಗಳ ಪರಿಶೀಲನೆಯ ನೆಪದಲ್ಲಿ ಪಂಚಾಯಿತಿ ಮಟ್ಟದಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ಗಳ ಪತ್ತೆ ಕಾರ್ಯಾಚರಣೆ ನಡೆಯುತ್ತಿದೆ.
ಸರ್ಕಾರ ಬಿಪಿಎಲ್ ಕಾರ್ಡ್‌ಗಳಿಗೆ ಹೊಸ ಷರತ್ತುಗಳನ್ನು ವಿಧಿಸುವ ಮೂಲಕ ₹25,000 ಕೋಟಿ ಉಳಿತಾಯ ಮಾಡುವ ಯೋಜನೆ ರೂಪಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ “ಆಪರೇಷನ್ ಬಿಪಿಎಲ್ ಕಾರ್ಡ್” ಎಂಬ ಹೆಸರಿನಲ್ಲಿ ರಾಜ್ಯಾದ್ಯಂತ ಬೋಗಸ್ ಕಾರ್ಡ್‌ಗಳನ್ನು ತಡೆಯುವ ಕಾರ್ಯಾಚರಣೆ ಆರಂಭವಾಗಿದೆ. ಈ ಕಾರ್ಯಾಚರಣೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಾಲ್ಕು ಬೇರೆ ಇಲಾಖೆಗಳ ಸಹಕಾರ ಪಡೆಯುತ್ತಿದೆ. ಸಾರಿಗೆ ಇಲಾಖೆ ವಾಹನಗಳ ಮಾಹಿತಿ, ಕಂದಾಯ ಇಲಾಖೆ ಜಮೀನಿನ ವಿವರ, ಆದಾಯ ತೆರಿಗೆ ಇಲಾಖೆ ತೆರಿಗೆ ಪಾವತಿ ಮಾಹಿತಿ ಒದಗಿಸುತ್ತಿದೆ.
ಕುಟುಂಬದ ವಾರ್ಷಿಕ ಆದಾಯ ₹1.20 ಲಕ್ಷ ಮೀರಿದರೆ, ಆದಾಯ ತೆರಿಗೆ ಪಾವತಿದಾರರಾಗಿದ್ದರೆ, ನಿಗದಿಗಿಂತ ಹೆಚ್ಚು ಜಮೀನು ಹೊಂದಿದ್ದರೆ, ನಗರ ಪ್ರದೇಶದಲ್ಲಿ 1000 ಚದರ ಅಡಿ ಪಕ್ಕಾ ಮನೆ ಹೊಂದಿದ್ದರೆ, ವೈಟ್ ಬೋರ್ಡ್ 4 ಚಕ್ರದ ವಾಹನ ಹೊಂದಿದ್ದರೆ—ಅಂತಹವರ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಲಾಗುತ್ತದೆ.
ಈ ಕ್ರಮದ ಮೂಲಕ ಸರ್ಕಾರ ಬಡವರಿಗೆ ನಿಜವಾದ ನೆರವು ನೀಡುವ ಉದ್ದೇಶದಿಂದ ಅನರ್ಹ ಫಲಾನುಭವಿಗಳನ್ನು ಪತ್ತೆಹಚ್ಚಿ, ಪಡಿತರ ವ್ಯವಸ್ಥೆಯ ಶುದ್ಧೀಕರಣಕ್ಕೆ ಮುಂದಾಗಿದೆ.