Breaking News : ಹವಾಮಾನ ಇಲಾಖೆಯಿಂದ ಮುನ್ಸೂಚನೆ ! ಈ ನಗರಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ

By Infoflick Correspondent

Updated:Monday, August 29, 2022, 22:43[IST]

Breaking News : ಹವಾಮಾನ ಇಲಾಖೆಯಿಂದ ಮುನ್ಸೂಚನೆ ! ಈ ನಗರಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ಅರಬ್ಬಿ ಸಮುದ್ರದಲ್ಲಿ, ಬಂಗಾಳಕೊಲ್ಲಿಯಲ್ಲಿನ ಸುಳಿಗಾಳಿ ಸೃಷ್ಠಿಯ ಪರಿಣಾಮ ರಾಜ್ಯದಲ್ಲಿ ಮಳೆಗೆ ಪೂರಕ ವಾತಾವರಣ ಇರುವುದರಿಂದ, ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಬೆಂಗಳೂರು  ನಗರದಲ್ಲಿ ಮಂಗಳವಾರವೂ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ನಗರ ಜಿಲ್ಲೆಯ ಎಲ್ಲ ಶಾಲೆ ಹಾಗೂ ಪಿಯುಸಿ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ. ಮಕ್ಕಳ ಸುರಕ್ಷತೆಗಾಗಿ ರಜೆ ನೀಡಲಾಗಿದೆ ಎಂದು ನಗರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ ತಿಳಿಸಿದ್ದಾರೆ.   

ರಾಮನಗರದಲ್ಲೂ ಭಾರಿ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ. ಹೆಚ್ಚಿನ ಶಾಲಾ ಆವರಣದಲ್ಲಿಯೂ ನೀರು ನಿಂತಿರುವುದು ಹಾಗೂ ಸಾರಿಗೆ ವ್ಯವಸ್ಥೆ ಕೊರೆತೆಯಿಂದಾಗಿ ಶಿಕ್ಷಕರೂ ಸಹ ಶಾಲೆಗಳಿಗೆ ತೆರಳಲು ಸಾಧ್ಯವಾಗದ ಕಾರಣದಿಂದಾಗಿ ರಜೆ ಘೋಷಣೆ ಮಾಡಲಾಗಿದೆ.

ಇಂದಿನಿಂದ ಬೆಳಗಾವಿ, ಗದಗ, ಕೊಪ್ಪಳ, ಹಾವೇರಿ, ಧಾರವಾಡ, ದಾವಣಗೆರೆ, ಬಳ್ಳಾರಿ, ತುಮಕೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ, ಚಿಕ್ಕಮಗಳೂರು, ಮಂಡ್ಯ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.