ಕರ್ನಾಟಕದಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಎಲ್ಲೆಲ್ಲಿ ಮಳೆಯಾಗಲಿದೆ..?

By Infoflick Correspondent

Updated:Wednesday, July 6, 2022, 16:45[IST]

ಕರ್ನಾಟಕದಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಎಲ್ಲೆಲ್ಲಿ ಮಳೆಯಾಗಲಿದೆ..?


ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಈಗಾಗಲೇ ವರುಣನ ಅಬ್ಬರ ಜೋರಾಗಿದೆ. ಬೆಂಗಳೂರಿನಲ್ಲಂತೂ ಬೆನ್ನುಬಿಡದೆ ತುಂತುರು ಮಳೆ ಸುರಿಯುತ್ತಲೇ ಇದೆ. ಕೆಲ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿಲಾಗಿದೆ. ಮುಂದಿನ 4 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.    

ಹಾಸನ, ಬೀದರ್, ವಿಜಯಪುರ, ಯಾದಗಿರಿ, ಬೆಳಗಾವಿ, ಕಲಬುರಗಿ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗಲಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳಳಲಾಗಿದೆ. ಅಗತ್ಯ ನೆರವು ನೀಡಲು ಸರ್ಕಾರ ಸಜ್ಜಾಗಿದ್ದು, ರಕ್ಷಣೆ ಪರಿಹಾರ ಕಾರ್ಯಚರಣೆಗೆ ಎಸ್​ಡಿಆರ್​ಎಫ್ ತಂಡಗಳು ಸಿದ್ಧವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.