ಯುಗಾದಿ ಹಬ್ಬಕದ ಪ್ರಯುಕ್ತ ಊರಿಗೆ ತೆರಳುವ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೆಎಸ್‌ಆರ್‌ಟಿಸಿ

By Infoflick Correspondent

Updated:Sunday, March 27, 2022, 10:56[IST]

ಯುಗಾದಿ ಹಬ್ಬಕದ ಪ್ರಯುಕ್ತ ಊರಿಗೆ ತೆರಳುವ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೆಎಸ್‌ಆರ್‌ಟಿಸಿ

ಹಬ್ಬಬಂತು ಎಂದರೆ ಕೆಲಸದ ನಿಮಿತ್ತ ರಾಜಧಾನಿಗೆ ವಲಸೆ ಹೋದವರು ಬ್ಯಾಗ ಏರಿಸಿ ಸಂತಸದಿಂದ ಊರಿನತ್ತ ತೆರಳುತ್ತಾರೆ. ಆಗ ಅವರಿಗೆ ಕಾಡುವುದು ಬಸ್ ಗಳ ಸಮಸ್ಯೆ. ಖಾಸಗಿ ಬಸ್ ಗಳು ದರ ಏರಿಸಿ ಬಿಟ್ಟಿರುತ್ತದೆ. ಆಗ ಹಬ್ಬದ ಸಂತಸದಲ್ಲಿರುವವರ ಕಿಸೆ ಬಿಸಿಯಾಗುತ್ತವೆ. ಮಧ್ಯಮವರ್ಗದವರು ಹಣದ‌‌ ಕೊರತೆಯಿಂದ ಹಬ್ಬದ ಸಡಗರದಲ್ಲಿ ಮನೆಗೆ ಹೋಗಲು ಹಿಂದೆಟು ಹಾಕುತ್ತಾರೆ.‌ಇನ್ನು ದೂರದೂರಿನ ಹಲವರು ಬಸ್ ಗಳಲ್ಲಿ ಸೀಟ್ ಗಳು ಸಿಗದೆ ಪರದಾಡುತ್ತಾರೆ. ಇವರಿಗೆಲ್ಲರಿಗೂ ಕೆಎಸ್‌ಆರ್‌ಟಿಸಿ ಸಿಹಿ ಸುದ್ದಿ ನೀಡಿದೆ. 

ಯುಗಾದಿ ಹಬ್ಬದಲ್ಲಿ ಸಾರಿಗೆ ಬಸ್ ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಎಸ್‌ಆರ್‌ಟಿಸಿ  ಸುಮಾರು 600 ಹೆಚ್ಚುವರಿ ವಿಶೇಷ ಬಸ್‌ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.  

ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 01.04.2022 ಹಾಗೂ 02.04.2022 ರಂದು  ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ ಹಾಗು ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ: 03.04.2022ರಂದು ವಿಶೇಷ 600 ಬಸ್ ಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. 

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇಕಡಾ 5ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. 

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. www.ksrtc.karnataka.gov.in ವೆಬ್ ಸೈಟ್ ಮುಖಾಂತರ ಟಿಕೆಟ್ ಬುಕ್ ಮಾಡಬಹುದಾಗಿದೆ.  

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಗುಲ್ಬರ್ಗ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ಮಾಡಲಾಗುವುದು. 

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಬಸ್ ವ್ಯವಸ್ಥೆ ಹಾಗು ಬೆಂಗಳೂರು ನಗರದ ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್(ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಬನಶಂಕರಿ ಕಡೆಯಿಂದ ಶಿವಮೊಗ್ಗ, ದಾವಣಗೆರೆ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೇಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.