ನಿಮ್ಮ ಅಕ್ಕ-ತಂಗಿ ನನ್ನ ಸ್ಥಾನದಲ್ಲಿದ್ದಿದ್ದರೆ ಈ ರೀತಿ ಮಾಡ್ತಿದ್ರ..! ಚಳಿ ಬಿಡಿಸಿದ ಡಿಕೆ ರವಿ ಪತ್ನಿ..?ಯಾರಿಗೆ ಗೊತ್ತಾ

Updated: Wednesday, October 7, 2020, 16:14 [IST]

ಹೌದು ವಿತರಕ ಪ್ರಶಾಂತ್ ಸಂಬರ್ಗಿ ಅವರು ಡ್ರಗ್ಸ್ ವಿಚಾರ ಹಬ್ಬಿದ ಮೇಲೆ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ.ಮತ್ತು ಮೊನ್ನೆ ಅಷ್ಟೇ ದಿವಂಗತ ಡಿಕೆ ರವಿ ಅವರ ಪತ್ನಿ ಕುಸುಮಾ ವಿಚಾರವಾಗಿ ,ತಮ್ಮ ಖಾತೆಯಲ್ಲಿ ಕೆಲ ಫೋಟೋಗಳನ್ನು ಪೋಸ್ಟ್ ಮಾಡಿಕೊಂಡು, ತದನಂತರ ಬ್ಯಾಡ್ ಲಕ್ ವರ್ಗಾವಣೆ ಎನ್ನುವ ನಿಟ್ಟಿನಲ್ಲಿ ಬರೆದು ಪೋಸ್ಟ್ ಮಾಡಿದ್ದರು ಎಂದು ಮಾಧ್ಯಮ ಒಂದರ ಮೂಲಕ ತಿಳಿದಿಬಂದಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ ದಿವಂಗತ ಡಿಕೆ ರವಿ ಅವರ ಪತ್ನಿ ಕುಸುಮಾ, ವಿತರಕ ಪ್ರಶಾಂತ್ ಸಂಬರ್ಗಿ ಅವರು ನೀಡಿದ್ದ ಹೇಳಿಕೆಗೆ ಮತ್ತು ಆ ಒಂದು ಪೋಸ್ಟ್ ಗೆ ಯಾವ ರೀತಿ ಪ್ರತಿಕ್ರಿಯೆ ನೀಡಿದ್ದಾರೆ ಗೊತ್ತಾ ಮುಂದೆ ಓದಿ.   

Advertisement

"ಸಹೋದರ ಪ್ರಶಾಂತ್ ಸಂಬರಗಿಯವರಿಗೆ,

ವೈಯುಕ್ತಿಕವಾಗಿ ನಿಮ್ಮ ಪರಿಚಯ ನನಗಿಲ್ಲ, ಕೆಲ ತಿಂಗಳುಗಳಿಂದ ನೀವು ಡ್ರಗ್ಸ್ ಹಾಗೂ ಇನ್ನಿತರ ಸಾಮಾಜಿಕ ಪಿಡುಗುಗಳ ವಿರುದ್ದ ನಡೆಸುತ್ತಿರುವ ಹೋರಾಟ ಪ್ರಶಂಸನೀಯ. ಯುವಸಮೂಹಕ್ಕೆ ಡ್ರಗ್ಸ್ ವಿರುದ್ದವಾಗಿ ಜಾಗ್ರತೆ ಮೂಡಿಸುತ್ತಿರುವ ನಿಮಗೆ ಅಭಿನಂದನೆಗಳು. ಯಾರನ್ನೋ ಮೆಚ್ಚಿಸುವ ಭರದಲ್ಲಿ ನನ್ನ ಅದೃಷ್ಟ(Luck) ವಿಷಯವನ್ನು ಪ್ರಸ್ತಾಪಿಸಿದ್ದೀರಿ. ಎಲ್ಲರ ಬದುಕಿನಲ್ಲಿ ಇಣುಕುವ ನೀವು ಹಿಂದೆ-ಮುಂದೆ ತಿಳಿಯದೇ ಇನ್ನೊಬ್ಬರ ಚಾರಿತ್ರ್ಯವಧೆಗೆ ಇಳಿಯುವುದು ನಿಮ್ಮ ಘನತೆಗೆ ಶೋಭೆ ತರುವಂತದಲ್ಲ ಎಂಬುದು ನನ್ನ ಅನಿಸಿಕೆ. 

Advertisement

ಪ್ರತಿಯೊಬ್ಬರ ಬದುಕಿನಲ್ಲೂ ಏಳು-ಬೀಳುಗಳಿರುತ್ತವೆ, ಇದೇ ರೀತಿ ನಿಮ್ಮ ಮನೆಯಲ್ಲೇ ಅಕ್ಕ-ತಂಗಿ ನನ್ನ ಸ್ಥಾನದಲ್ಲಿದ್ದಿದ್ದರೆ ಹೀಗೆಯೇ ವಿಡಂಬನೆ ಮಾಡುತ್ತಿದ್ದಿರಾ?
ಹೆಣ್ಣು‌ ಎಂಬ ಮಾತ್ರಕ್ಕೆ ಇಂತಹ ವಿಡಂಬನೆ ಮತ್ತು ಅಪಪ್ರಚಾರಗಳಿಗೆ ಒಳಗಾಗಬೇಕೆ? ಬೇರೆಯವರ ಮನೆಯ ಹೆಣ್ಣುಮಗಳ ಲಕ್ ಯಾವುದು ಎಂದು ಹುಡುಕುವ ಶಕ್ತಿ ಇರುವ ನಿಮಗೆ ಹತ್ರಾಸ್ ನ ಮನೀಷಾ ಅತ್ಯಾಚಾರ-ಕೊಲೆ ಪ್ರಕರಣ ಕಣ್ಣಿಗೆ ಕಾಣುತ್ತಿಲ್ಲವೇಕೆ? 

Advertisement

ಸಹೋದರ ಪ್ರಶಾಂತ್ ಸಂಬರಗಿ ಅವರೇ, ಇದರಿಂದ ಹೆಣ್ಣುಮಕ್ಕಳ ಕುರಿತ ನಿಮ್ಮ ಬುದ್ದಿಮಟ್ಟ ತಿಳಿಯುತ್ತದೆ. ಈ ಆಲೋಚನೆಗಳನ್ನು ಮುಂದುವರಿಸಿ.ದೇವರು ನಿಮಗೆ ಒಳ್ಳೆಯದು ಮಾಡಲಿ." ಎಂದು ಈ ಕುಸುಮಾ ಅವರು ಈ ರೀತಿಯಾಗಿ ಪ್ರಶಾಂತ್ ಸಂಬರ್ಗಿ ಅವರಿಗೆ ಚೆನ್ನಾಗಿ ಚಳಿ ಬಿಡಿಸಿದ್ದಾರೆ ಎಂದು ಮಾಧ್ಯಮ ಮೂಲಕ ಕೇಳಿಬಂದಿದೆ.

ಹಾಗೆ ಕೇಳಿಬಂದಿದ್ದು, ಈ ವಿಷಯ ಸದ್ಯ ಎಲ್ಲಾ ಕಡೆ ಚರ್ಚೆ ಆಗುತ್ತಿದೆ. ಇದರ ಬಗ್ಗೆ ನಿಮ್ಮ ಅನಿಸಿಕೆಗಳನ್ನು ನಮ್ಮ ಕಾಮೆಂಟ್ ಬಾಕ್ಸ್ ಗೆ ಕಾಮೆಂಟ್ ಮಾಡಿ, ಈ ವಿಷಯದಲ್ಲಿ ಯಾರೂ ಸರಿ ತಪ್ಪೆಂದು ಕಾಮೆಂಟ್ ಮಾಡಿ ಧನ್ಯವಾದಗಳು..