ಮಾಸ್ಕ್ ಧಾರಣೆ‌ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ : ಕೊರೊನಾ ನಾಲ್ಕನೇ ಅಲೆ ಆರಂಭ

By Infoflick Correspondent

Updated:Monday, April 25, 2022, 21:11[IST]

ಮಾಸ್ಕ್ ಧಾರಣೆ‌ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ  :   ಕೊರೊನಾ ನಾಲ್ಕನೇ ಅಲೆ ಆರಂಭ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ರಾಜ್ಯದಲ್ಲಿ ನಾಲ್ಕನೇ ಅಲೆ ಆರಂಭವಾಗಲಿದೆಯಾ ಎಂಬ ಅನುಮಾನ ಮೂಡಿದೆ. ಹಾಗಾಗಿ ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು,ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಕೋವಿಡ್ ಸಾಂಕ್ರಾಮಿಕಕ್ಕೆ ಸಂಬಂಧಿಸಿದಂತೆ ಪರಿಶೀಲನಾ ಸಭೆ ಜರುಗಿತು. ಸಭೆ ಬಳಿಕ ಸಚಿವ ಸುಧಾಕರ್‌ ಅವರು ಮಾಧ್ಯಮಗಳ ಮೂಲಕ ಜನತೆಗೆ ಮಹತ್ವದ ಮಾಹಿತಿ ನಿಡಿದರು. 

ಲಸಿಕೆ ಅಭಿಯಾನಕ್ಕೆ ಒತ್ತು ನೀಡಲಾಗುವುದು, ಹಾಗು ಸೋಂಕು ಹೆಚ್ಚು ಇರುವ ದೇಶದಿಂದ ಬರುವವರ ಮೇಲೆ ನಿಗ ಇಡಲಾಗುವುದು, ಕರೋನ ಸೋಂಕಿನ ಬಗ್ಗೆ ಶೀಘ್ರದಲ್ಲಿ ಮಾರ್ಗಸೂಚನೆ ಬಿಡುಗಡೆ ಮಾಡಲಾಗುವುದು ಎಂದು ಸುಧಾಕರ್‌ ಹೇಳಿದರು. 

ಇನ್ಮುಂದೆ ರಾಜ್ಯದಲ್ಲಿ ಮಾಸ್ಕ್‌ ಕಡ್ಡಾಯ ಮಾಡಲಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಮಾಸ್ಕ್‌ ಧಾರಣೆ ನಿಯಮ ಇನ್ನು ಮುಂದೆ ಕಡ್ಡಾಯವಾಗಿರಲಿದೆ.  

ದೇಶದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಕಾನ್ಫೆರೆನ್ಸ್ ಅನ್ನು ಏಪ್ರಿಲ್ 27ರಂದು ನಡೆಸಲಿದ್ದು, ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣಕ್ಕೆ ಮಾರ್ಗಸೂಚಿ ಪ್ರಕಟವಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.