ವಾಹನ ಸವಾರರಿಗೆ ಗುಡ್ ನ್ಯೂಸ್! ಪೆಟ್ರೋಲ್‌ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಭಾರಿ ಇಳಿಕೆ

By Infoflick Correspondent

Updated:Sunday, May 22, 2022, 00:06[IST]

ವಾಹನ ಸವಾರರಿಗೆ ಗುಡ್ ನ್ಯೂಸ್! ಪೆಟ್ರೋಲ್‌ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಭಾರಿ ಇಳಿಕೆ

ಇದೀಗ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ ಪೆಟ್ರೋಲ್‌ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಭಾರಿ ಇಳಿಕೆ ಮಾಡಿದೆ. 
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒಂದು ಸಮಾಧಾನಕರ ಸುದ್ದಿ ಹಂಚಿಕೊಂಡಿದ್ದು, ಪೆಟ್ರೋಲ್‌, ಡೀಸೆಲ್ ಮೇಲಿನ ಅಬಕಾರಿ ಸುಂಕ ಭಾರಿ ಇಳಿಕೆ ಮಾಡಿರುವ ಬಗ್ಗೆ ಟ್ವೀಟ್‌ ಮಾಡಿದ್ದಾರೆ.   

ಇದೀಗ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ ಪೆಟ್ರೋಲ್‌ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಭಾರಿ ಇಳಿಕೆ ಮಾಡಿದೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 8 ರೂಪಾಯಿ ಇಳಿಕೆ ಮಾಡಿದೆ. 

ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 8 ರೂಪಾಯಿ ಇಳಿಕೆ ಮಾಡಿದೆ. ಇನ್ನು ಡೀಸೆಲ್‌ ಮೇಲಿನ ಅಬಕಾರಿ ಸುಂಕ ಪ್ರತಿ ಲೀಟರ್‌ಗೆ 6 ರೂಪಾಯಿ ಇಳಿಕೆಯಾಗಿದೆ. ತತ್ಫಲವಾಗಿ, ಅಬಕಾರಿ ಸುಂಕ ಕಡಿತ ಹಿನ್ನೆಲೆ ಪೆಟ್ರೋಲ್ ದರ 9.5 ರೂ. ಇಳಿಕೆಯಾಗಲಿದೆ. ಅಬಕಾರಿ ಸುಂಕ ಕಡಿತ ಹಿನ್ನೆಲೆ ಡೀಸೆಲ್ ದರವೂ 7 ರೂ. ಇಳಿಕೆಯಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್‌ ಮಾಡಿದ್ದಾರೆ. 

ಪೆಟ್ರೋಲ್ ಮಾತ್ರವಲ್ಲದೇ ಇತರೆ ವಸ್ತುಗಳ ಬೆಲೆ ಕೂಡ ಇಳಿಕೆಯಾಗಿದ್ದು, ಈ ಬಗ್ಗೆ ಮಾಹಿತಿ ನೀಡಿದ ನಿರ್ಮಲಾ ಸೀತಾರಾಮನ್, 'ಸಿಮೆಂಟ್ ಲಭ್ಯತೆಯನ್ನು ಸುಧಾರಿಸಲು ಮತ್ತು ಸಿಮೆಂಟ್ ಬೆಲೆಯನ್ನು ಕಡಿಮೆ ಮಾಡಲು ಉತ್ತಮ ಲಾಜಿಸ್ಟಿಕ್ಸ್ ಮೂಲಕ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ನಮ್ಮ ಆಮದು ಅವಲಂಬನೆ ಹೆಚ್ಚಿರುವ ಪ್ಲಾಸ್ಟಿಕ್ ಉತ್ಪನ್ನಗಳಿಗೆ ಕಚ್ಚಾ ವಸ್ತುಗಳು ಮತ್ತು ಮಧ್ಯವರ್ತಿಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಸಹ ನಾವು ಕಡಿಮೆ ಮಾಡುತ್ತಿದ್ದೇವೆ. ಉಕ್ಕಿನ ಕೆಲವು ಕಚ್ಚಾ ವಸ್ತುಗಳ ಮೇಲಿನ ಆಮದು ಸುಂಕವನ್ನು ಕಡಿಮೆ ಮಾಡಲಾಗುವುದು. ಕೆಲವು ಉಕ್ಕಿನ ಉತ್ಪನ್ನಗಳ ಮೇಲೆ ರಫ್ತು ಸುಂಕವನ್ನು ವಿಧಿಸಲಾಗುವುದು ಎಂದು ಹೇಳಿದರು. 

ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಹ ಟ್ವೀಟ್‌ ಮಾಡಿದ್ದು ಈ ಬೆಲೆ ಇಳಿಕೆಯಿಂದ ಜನರು ಜೀವನ ನಡೆಸುವುದು ಸುಲಭವಾಗುತ್ತದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.