ಸ್ಟಾರ್ ನಟರಿಗೆ ಅಭಿಮಾನಿಯ ಮನವಿ: ಕೋವಿಡ್ ಸಂಕಷ್ಟದಲ್ಲಿ ಇರುವವರಿಗೆ ಏನು ಮಾಡಬೇಕು..??

Updated: Thursday, April 22, 2021, 20:57 [IST]

ಡಿಯರ್ ಸ್ಟಾರ್ ನಟರೇ..
ಕೋಟಿ ಕೋಟಿ ಅಭಿಮಾನಿಗಳನ್ನು ಪಡೆದ ಸಾಧಕರು ನೀವು. ತಾಯಿ ಪ್ರೀತಿ ನಂತರ ಅಭಿಮಾನಿಗಳ ಪ್ರೀತಿಯೇ ಅತ್ಯಂತ ಶ್ರೇಷ್ಠವಾದದ್ದು ಎಂಬುದು ನನ್ನ ನಂಬಿಕೆ. ನೀವು ಎಂದೂ ಅವರನ್ನು ನೋಡಲ್ಲ, ನೋಡಿದ್ರೂ ಮಾತನಾಡಿಸಲ್ಲ. ಮಾತನಾಡಿಸಿದ್ರೂ ನಿಮಗೆ ಆ ವ್ಯಕ್ತಿ ಅದರಾಚೆ ನೆನಪಿರಲ್ಲ. ಆದರೂ ಆ ಅಭಿಮಾನಿ ನಿಮ್ಮನ್ನು ಅವನ ಜೀವನದ ಆರಾಧ್ಯದೈವವನ್ನಾಗಿಸಿಕೊಳ್ತಾನೆ. ಜೀವನವಿಡೀ ನಿಮ್ಮನ್ನೇ ಧ್ಯಾನಿಸುತ್ತಾನೆ! ನಿಮ್ಮ ಬಗ್ಗೆ ಎಳ್ಳಷ್ಟು ಅಪಪ್ರಚಾರವಾದ್ರೂ ಹಿಂದೆ ಮುಂದೆ ಯೋಚಿಸ್ದೆ ನಿಮ್ಮ ಪರವಾಗಿ ನಿಂತುಬಿಡ್ತಾನೆ. ನಿಮಗೆ ಕಿಂಚಿತ್ತು ತೊಂದ್ರೆಯಾದ್ರೂ ನೊಂದು ಹೋಗ್ತಾನೆ..   

ಅಂತಹ ಅಭಿಮಾನಿ ಇವತ್ತು ಕಷ್ಟದಲ್ಲಿದ್ದಾನೆ..

ಸೋಂಕಿಗೆ ಒಳಗಾಗುತ್ತಿರುವ ಲಕ್ಷಾಂತರ ಜನರಲ್ಲಿ ನಿಮ್ಮ ಅಭಿಮಾನಿಗಳೂ ಇದ್ದಾರೆ. ಆದ್ರೆ 
ಅವರು ತಮ್ಮ ಕಷ್ಟವನ್ನು ನಿಮ್ಮ ತನಕ ತಲುಪಿಸಲಾರರು.  ಏಕೆಂದರೆ ನೀವು ಅವರಿಗೆ ಗೊತ್ತೇ ವಿನಃ ಅವರು ನಿಮಗೆ ಗೊತ್ತಿಲ್ಲ. ನಿಮ್ಮ ಹುಟ್ದಬ್ಬಕ್ಕೆ ಗಂಟೆಗಟ್ಟಲೆ ಕ್ಯೂನಲ್ಲಿ ನಿಂತು ನಿಮ್ಗೆ ವಿಶ್ ಮಾಡಿ ಗೊತ್ತಿದೆಯೇ ಹೊರತು ನಿಮ್ಮ ಸಂಪರ್ಕದಲ್ಲಿರೋದು ಗೊತ್ತಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಪರವಾಗಿ ವರ್ಷಗಟ್ಟಲೆ ಪ್ರಚಾರ ಮಾಡೋದು, ಜಗಳ ಮಾಡೋದು ಗೊತ್ತೇ ವಿನಃ ನಿಮ್ಮಿಂದ ಏನನ್ನೂ ನಿರೀಕ್ಷಿಸಿ ಗೊತ್ತಿಲ್ಲ. ನಿಮ್ಮ ಸಿನಿಮಾ ಬಿಡುಗಡೆಯಾದಾಗ ಜಾತ್ರೆಯಂತೆ ಖರ್ಚುಮಾಡಿ ಸಂಭ್ರಮಿಸುವುದು ಗೊತ್ತಿದೆಯೇ ವಿನಃ ಅಷ್ಟೇ ಸಲೀಸಾಗಿ ಕೊರೋನಗೆ ಚಿಕಿತ್ಸೆ ಪಡೆಯುವುದು ಹೇಗೆಂದು ಗೊತ್ತಿಲ್ಲ ..

ಅಂತಹವರಿಗಾಗಿ ಏನಾದ್ರೂ ಮಾಡ್ಲಿಕ್ಕಾಗುತ್ತಾ ಡಿಯರ್  ಸ್ಟಾರ್ಸ್? 

ಕಷ್ಟದಲ್ಲಿರುವ ಅಭಿಮಾನಿಗಳನ್ನು ಹುಡುಕುವುದು ಕಷ್ಟ ಅನ್ನೋದು ಗೊತ್ತು. ನೀವೇನಾದ್ರೂ ಸಹಾಯ ಮಾಡ್ತೀನಿ ಅಂತ ಮುಂದೆ ಬಂದ್ರೆ ಆಕಾಂಕ್ಷಿಗಳು ಸಾವಿರಾರು ಸಂಖ್ಯೆಯಲ್ಲಿ ಬಂದ್ಬಿಡ್ತಾರೆ ಅನ್ನೋದು ಗೊತ್ತು. ಆದ್ರೂ ಏನಾದ್ರೂ ಮಾಡ್ಬಹುದಾ ಈ ಸಂದರ್ಭದಲ್ಲಿ ನೋಡಿ ಪ್ಲೀಸ್..  ಏಕೆಂದರೆ ಈ ಸಮಾಜ ನೀವು ಚೆನ್ನಾಗಿರಲು ಏನೆಲ್ಲಾ ಕೊಟ್ಟಿದೆ.. ಅಂತಹ ಸಮಾಜ ಇಂದು ಕಷ್ಟದಲ್ಲಿರುವಾಗ Stay Home, Stay Safe  ಅಂತ ಉಚಿತ ಸಲಹೆಯೊಂದನ್ನು ಕೊಟ್ಟು ನಮ್ಮಂತಹ ಸಾಮಾನ್ಯರಂತೆ ನೀವೂ ಗೂಡು ಸೇರಿ ಕೂತುಬಿಡೋದು ಯಾವ ನ್ಯಾಯ? ನಿಮಗೆ ಈ ಅಭಿಮಾನಿಗಳು ಮತ್ತು ಸಮಾಜ ನೀಡಿರುವ ಸ್ಥಾನಮಾನ ಸಾಮಾನ್ಯದಲ್ಲವಲ್ಲ..

ಓಹ್ ಹೌದಾ.. 
ಹಾಗಾದ್ರೆ ಒಂದಷ್ಟು ಕುಟುಂಬಗಳಿಗೆ ಅಕ್ಕಿ ಕೊಡ್ತೀವಿ!

ಒಂದಷ್ಟು ಹೊಟ್ಟೆಗಳಿಗೆ ಅನ್ನ ನೀಡ್ತೀವಿ! 

ಮಾಸ್ಕ್ ವಿತರಿಸ್ತೀವಿ..

ಒಂದಷ್ಟು ಜನರನ್ನು ಊರುಗಳಿಗೆ ತಲುಪಿಸೋಕೆ ಗಾಡಿ ಕಳಿಸ್ತೀವಿ..  ಅನ್ನೋ ಸಪ್ಪೆ ನಿರ್ಧಾರಗಳಿಗೆ ಬರಬೇಡಿ ಪ್ಲೀಸ್. ಇಲ್ಲಿ ಜನರ ಜೀವಗಳು ಹೋಗ್ತಿವೆ. ನಿಜಕ್ಕೂ ಏನಾದ್ರೂ ಮಾಡುವುದಿದ್ದರೆ ನಿಮ್ಮ ಸಂಪರ್ಕ, ಪ್ರಭಾವ ಬಳಸಿ ಜನರ ಜೀವಗಳನ್ನು ಕಾಪಾಡಿ.  ನಿಮ್ಮ ತೋಟದ ಮನೆಯಲ್ಲೋ, ನಿಮ್ಮ ಹೋಟೆಲ್ ಗಳಲ್ಲೋ, ಅಥವಾ ನಿಮ್ಗೆ ಗೊತ್ತಿರುವ ಕಲ್ಯಾಣಮಂಟಪಗಳಲ್ಲೋ ಒಂದು ನೂರಿನ್ನೂರು ಬೆಡ್ ಗಳ ಕೋಡಿ..


ಹೀಗೆ ನಟ-ನಟಿಯರು ಯಾವ ರೀತಿ ಸಹಾಯ ಮಾಡಬಹುದು ಎಂಬುದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.