ಗಣೇಶ ಹಬ್ಬಕ್ಕೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ ! ಇಲ್ಲಿದೆ ನೋಡಿ ತಪ್ಪದೇ ಪಾಲಿಸಬೇಕಾದ ನಿಯಮಗಳು

By Infoflick Correspondent

Updated:Tuesday, August 30, 2022, 11:44[IST]

ಗಣೇಶ ಹಬ್ಬಕ್ಕೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ ! ಇಲ್ಲಿದೆ ನೋಡಿ ತಪ್ಪದೇ ಪಾಲಿಸಬೇಕಾದ ನಿಯಮಗಳು

ಗಣೇಶ ಹಬ್ಬಕ್ಕೆ ದಿನಗಣನೆ ಪ್ರಾರಂಭವಾಗಿದೆ.‌ ಸಾರ್ವಜನಿಕವಾಗಿ ಹಾಗು‌ ಮನೆಯಲ್ಲಿ  ಗಣಪತಿ ಇಟ್ಟು ಪೂಜೆ ಸಲ್ಲಿಸಿ ಹಬ್ಬ ಆಚರಿಸಲು ಸಾರ್ವಜನಿಕ ಹಿತದೃಷ್ಟಿಯಿಂದ ಸರ್ಕಾರ ಕೆಲವು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸಲು ತೀರ್ಮಾನಿಸಿದ್ದು, ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಇಲ್ಲಿದೆ ನೋಡಿ ಮಾರ್ಗಸೂಚಿ.‌ ಬೇರೆ ರಾಜ್ಯದಿಂದ ಬರುವಂತಹ ಪಿಓಪಿ ವಿಗ್ರಹಗಳನ್ನು ತಡೆಗಟ್ಟಲು ಸಂಬಂಧಿಸಿದ ಚೆಕ್‍ಪೋಸ್ಟ್ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಹಾಗೂ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ಬದಲು ಬಣ್ಣರಹಿತ ಮಣ್ಣಿನ ಮೂರ್ತಿಗಳನ್ನು ತಯಾರಿಸುವಂತೆ ತಯಾರಕರಿಗೆ  ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.

ಪಿಓಪಿ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವ್ಯಕ್ತಿ/ಸಂಸ್ಥೆಗಳಿಗೆ ವ್ಯಾಪಾರ ಲೈಸೆನ್ಸ್ ನೀಡದಿರಲು ಮತ್ತು ಲೈಸೆನ್ಸ್ ಪಡೆಯದೇ ಅನಧಿಕೃತವಾಗಿ ತಯಾರಿ/ಮಾರಾಟ ಮಾಡುವ ವ್ಯಕ್ತಿ/ಸಂಸ್ಥೆಗಳ ಮೇಲೆ ಕಾನೂನು ಕ್ರಮವನ್ನು ತಕ್ಷಣಕ್ಕೆ ಜರುಗಿಸುವುದು ಸೂಚನೆ ನೀಡಲಾಗಿದೆ.

ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು ಸಮಿತಿಯವರು ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿಯನ್ನು ಪಡೆದು ನಂತರವೇ ಸ್ಥಾಪಿಸುವುದು. ಈ ಅನುಮತಿ ಪತ್ರದಲ್ಲಿ ಲೈಸೆನ್ಸ್ ನೀಡುವ ಸಂದರ್ಭದಲ್ಲಿ ಪ್ಲಾಸ್ಟಿಕ್ ಫ್ಲೆಕ್ಸ್ ಮತ್ತಿತರ ವಸ್ತುಗಳ ಬಳಕೆ ನಿಷೇಧಿಸುವುದು ಹಾಗೂ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯತನಕ ಧ್ವನಿವರ್ಧಕ ಬಳಕೆ ನಿಷೇಧಿಸುವುದು. 

 ಗೌರಿ ಗಣೇಶ ಹಬ್ಬದ ವೇಳೆ ಸಾರ್ವಜನಿಕರು ಬಣ್ಣರಹಿತ ಮಣ್ಣಿನ ಗಣೇಶ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ, ಸ್ಥಳೀಯ ಸಂಸ್ಥೆಗಳು ನಿಗದಿಪಡಿಸಿದ ಸ್ಥಳಗಳಲ್ಲಿ ಮೂರ್ತಿಗಳನ್ನು ವಿಸರ್ಜಿಸುವುದು. 5 ಅಡಿ ಎತ್ತರದ ಮಣ್ಣಿನ ವಿಗ್ರಹಗಳನ್ನು ಮಾತ್ರ ತಯಾರಿಸಲು ಅನುಮತಿ ನೀಡಿದೆ. ಯಾವುದೇ ಕಾರಣಕ್ಕೂ ತಿಂಗಳುಗಳವರೆಗೆ ಗಣೇಶನನ್ನು ಕೂರಿಸುವಂತಿಲ್ಲ ಎಂದಿದ್ದಾರೆ. 

ಹಬ್ಬ ಆಚರಿಸಿ ತದನಂತರ ಸ್ಥಳೀಯ ಸಂಸ್ಥೆಗಳು ನಿಗದಿಪಡಿಸಿದ ಸ್ಥಳಗಳಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸಬೇಕು. ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಮೊಬೈಲ್ ಟ್ಯಾಂಕ್‍ಗಳಲ್ಲಿ/ಕಲ್ಯಾಣಿಗಳ ಪಕ್ಕದಲ್ಲಿ ಹಸಿ ಕಸ ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಕ್ರಮ ವಹಿಸುವುದು. ಎಂದು ತಿಳಿಸಲಾಗಿದೆ.