2 ಕ್ಷೇತ್ರದ ಸೋಲಿಗೆ ಯಾರು ಕಾರಣ ಎಂಬುದನ್ನ ಬಿಚ್ಚಿಟ್ಟ ಸಿದ್ದರಾಮಯ್ಯ..! ಕುಸುಮಾ ಬಗ್ಗೆ ಶಾಕಿಂಗ್ ಹೇಳಿಕೆ..?

Updated: Wednesday, November 11, 2020, 14:50 [IST]

ಹೌದು ನಿನ್ನೆಯಶ್ಟೇ ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಹೊರಬಿದ್ದ ಹಿನ್ನೆಲೆಯಲ್ಲಿ ರಾಜ್ಯದ ಕಾಂಗ್ರೆಸ್ ನಾಯಕರಿಗೆ ನುಂಗಲಾರದ ತುತ್ತಾಗಿದೆ ಎನ್ನಬಹುದು.. ಅತ್ತ ಶಿರಾದಲ್ಲೂ ಮತ್ತು ಆರ್ ಆರ್ ನಗರದಲ್ಲೂ ಸೋಲು ಕಂಡ ಬಳಿಕ, ಕಾಂಗ್ರೆಸ್ ಮುಖಂಡರುಗಳು ಇದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಹೌದು ಕಾಂಗ್ರೆಸ್ ಪಕ್ಷದ ಸೋಲಿನ ಬಳಿಕ ಸಿದ್ದರಾಮಯ್ಯನವರು ಪ್ರತಿಕ್ರಿಯೆ ನೀಡಿದ್ದಾರೆ ಜೊತೆಗೆ ಹೇಳಿಕೆಯನ್ನು ಸಹ ಕೊಟ್ಟಿದ್ದಾರೆ. 

ಸಿದ್ದರಾಮಯ್ಯ ನವರು ಹೇಳಿದ ಹಾಗೆ, 'ಆರ್ ಆರ್ ನಗರದಲ್ಲಿ, ನಾವು ಅಭ್ಯರ್ಥಿ ಆಯ್ಕೆ ಮಾಡಿದ್ದು ತಡವಾಯ್ತು ಎಂಬುದಾಗಿ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ. 

Advertisement

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ ಹಾಗೆ " ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದ ಸೋಲನ್ನು ನಾವು ವಿನೀತರಾಗಿ ಒಪ್ಪಿಕೊಂಡಿದ್ದೇವೆ. ಆದರೆ ಇದು ಪ್ರಜಾಪ್ರಭುತ್ವದ ಸೋಲು. ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು ಎನ್ನುವುದು ವಿಷಾದದ ಸಂಗತಿ. ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರರೂಢ ಪಕ್ಷದ ಅಭ್ಯರ್ಥಿಗಳು ಗೆಲ್ಲುತ್ತಾರೆ. ಆಡಳಿತ ಪಕ್ಷದ ಶಾಸಕರಿದ್ದರೆ ತಮ್ಮ ಕ್ಷೇತ್ರಕ್ಕೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯ ಜನರಲ್ಲಿರುತ್ತದೆ. ಇದೇ ಫಲಿತಾಂಶ ಸಾಮಾನ್ಯ ಚುನಾವಣೆಯಲ್ಲಿ ನಿರೀಕ್ಷಿಸಲಾಗದು.  

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವನ್ನು ಸ್ವೀಕರಿಸಲೇಬೆಕು. ನಾವೂ ಒಪ್ಪಿಕೊಂಡಿದ್ದೇವೆ. ಇದರಿಂದ ಪಕ್ಷದ ಕಾರ್ಯಕರ್ತರು ಕಂಗೆಡಬೇಕಾಗಿಲ್ಲ. ಇದರಿಂದ ಯಾವ ಪಕ್ಷವೂ ಬಲಶಾಲಿಯಾಗುವುದಿಲ್ಲ, ಯಾವ ಪಕ್ಷವೂ ಬಲಹೀನವಾಗುವುದೂ ಇಲ್ಲ. ಇದು ಸಮಗ್ರ ರಾಜ್ಯದ ಜನಾಭಿಪ್ರಾಯ ಅಲ್ಲ, ಇದು ಎರಡು ಸ್ಥಾನಗಳಿಗೆ ನಡೆದ ಚುನಾವಣೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಜನರಿಗೆ ಒಳ್ಳೆಯದಾಗಲಿ, ನಮ್ಮ ಶಾಸಕನೂ ರಾಜಕೀಯವಾಗಿ ಜನಪ್ರಿಯನಾಗಲಿ ಎಂದು ಆರ್.ಆರ್.ನಗರಕ್ಕೆ ಸುಮಾರು ರೂ.2000 ಕೋಟಿ ಕಾಮಗಾರಿಯನ್ನು ಮಂಜೂರು ಮಾಡಿದ್ದೆ. ಅದರ ಫಲ ನಮ್ಮ ಪಕ್ಷಕ್ಕೆ ಸಿಗಲಿಲ್ಲ, ಅವರಿಗೆ ಸಿಕ್ಕಿದೆ.  

Advertisement

ಮುನಿರತ್ನ ಅವರು ಪಕ್ಷಾಂತರ ಮಾಡಿದ ದಿನದಿಂದ ಚುನಾವಣಾ ತಯಾರಿ ಪ್ರಾರಂಭಿಸಿದ್ದರು. ನಾವು ನಮ್ಮ ಅಭ್ಯರ್ಥಿಯ ಆಯ್ಕೆಯನ್ನು ಸ್ವಲ್ಪ ತಡವಾಗಿ ಮಾಡಿದೆವು, ಇದರಿಂದಾಗಿ ಪ್ರಚಾರ ವಿಳಂಬವಾಗಿ ಪ್ರಾರಂಭಿಸಬೇಕಾಯಿತು. ಸೋಲಿಗೆ ಇದೂ ಒಂದು ಕಾರಣ ಇರಬಹುದು. ಶಿರಾದಲ್ಲಿ ಟಿ.ಬಿ.ಜಯಚಂದ್ರ ಜನತೆಯ ಬದುಕು ಉಳಿಸುವ ನದಿನೀರು ಹರಿಸಿದ್ದರು. ಬಿಜೆಪಿಯವರು ಬಂದು ಅಕ್ರಮವಾಗಿ ಸಂಪಾದಿಸಿದ್ದ ಹಣದ ಹೊಳೆ ಹರಿಸಿದ್ದರು. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾದ ಬೆಳವಣಿಗೆ. ಜನರ ಸೇವೆ ಮಾಡಿದವರನ್ನು ಜನ ಪ್ರಾಮಾಣಿಕವಾಗಿ ಗುರುತಿಸಿ ಹರಸಬೇಕು.  

Advertisement

ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಹೀನಾಯವಾಗಿ ಸೋತಿರುವುದರಿಂದ ಆ ಪಕ್ಷದ  ಮತಗಳು ಬಿಜೆಪಿ ಬುಟ್ಟಿಗೆ ಬಿದ್ದು ಅವರ ಗೆಲುವಿಗೆ ನೆರವಾಯಿತು. ಮುಖ್ಯವಾಗಿ ಶಿರಾದಲ್ಲಿ ಜೆಡಿಎಸ್ ತನ್ನ ಮತಗಳನ್ನಾದರೂ ಉಳಿಸಿಕೊಂಡಿದ್ದರೆ ಖಂಡಿತ ಬಿಜೆಪಿ ಇಷ್ಟು ಸುಲಭದಲ್ಲಿ ಗೆಲ್ಲುತ್ತಿರಲಿಲ್ಲ" ಎಂದು ಫಲಿತಾಂಶದ ನಂತರ ಸಾಮಾಜಿಕ ಜಾಲತಾಣ ಒಂದರ ಖಾತೆಯಲ್ಲಿ ಬರೆದು ಪೋಸ್ಟ್ ಮಾಡಿದ್ದಾರೆ. ಈ ಮಾಹಿತಿ ಬಗ್ಗೆ ನಿಮ್ಮ ಅನಿಸಿಕೆಗಳನ್ನು ನಮಗೆ ಕಾಮೆಂಟ್ ಮಾಡಿ ಶೇರ್ ಮಾಡಿ ,ಹಾಗೆ ಮುನಿರತ್ನ ಅವರ ಗೆಲುವಿನ ಬಗ್ಗೆ ಅನಿಸಿಕೆಗಳನ್ನು ತಿಳಿಸಿ..ಧನ್ಯವಾದಗಳು..