ಹಸಿವಿನಿಂದ ಅಕ್ಕಿ ಕೇಳಿದ್ದಕ್ಕೆ ಸತ್ತು ಹೋಗಿ ಎಂದ ಸಚಿವ: ಮಿನಿಸ್ಟರ್ ವಿರುದ್ಧ ಸಿಎಂ ಗರಂ..! ಆಡಿಯೋ ವೈರಲ್

Updated: Wednesday, April 28, 2021, 17:38 [IST]

ಆಹಾರ ಸಚಿವ ಉಮೇಶ್ ಕತ್ತಿ ನೀಡಿರುವ ಉಡಾಫೆ ಹಾಗೂ ಬೇಜವಾಬ್ದಾರಿ ಹೇಳಿಕೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ವಿಷಾದ ವ್ತಕ್ತಪಡಿಸಿದ್ದಾರೆ. ಅಲ್ಲದೇ, ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಚಿವ ಉಮೇಶ್ ಕತ್ತಿ ಆಹಾರ ಮತ್ತು ನಾಗರೀಕ ಖಾತೆ ಸಚಿವರಾಗಿದ್ದು, ರೈತನೊಬ್ಬ 5 ಕೆ.ಜೆ ಅಕ್ಕಿ ಬದಲಾಗಿ 3 ಕೆ.ಜಿ ನೀಡುತ್ತಿರುವುದು ಸಾಯಬೇಕೇ ಬದುಕಬೇಕೇ ಎಂದು ಕೇಳಿದ್ದಾರೆ. ಇದಕ್ಕೆ ಸಾಯಿ ಎಂದು ಹೇಳಿರುವುದು ಒಬ್ಬ ಸಚಿವನಾಗಿ ಸರಿಯಲ್ಲ. ಆ ಭಾಗದಲ್ಲಿರುವ ಜನರಿಗೆ ಗೋಧಿ ಬೇಡವಾದರೆ 5 ಕೆ.ಜಿ ಅಕ್ಕಿಯನ್ನು ಕೊಡಲು ವ್ಯವಸ್ಥೆ ಮಾಡಲಾಗುವುದು.   

ಉಮೇಶ್ ಕತ್ತಿ ಅವರ ಹೇಳಿಕೆಗೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಮಾಧ್ಯಮ ಪ್ರಕಟಣೆ ಮೂಲಕ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.ಕೊರೋನಾ ಸಂಕಷ್ಟದಲ್ಲೂ ರಾಜ್ಯ ಸರ್ಕಾರ ಪಡಿತರ ಅಕ್ಕಿ ಕಡಿತಗೊಳಿಸಿದನ್ನು ಸಚಿವರಿಗೆ ಕರೆ ಮಾಡಿ ಪ್ರಶ್ನಿಸಿದ ವ್ಯಕ್ತಿಯೊಬ್ಬರಿಗೆ ಸಾಯುವುದು ಒಳ್ಳೆಯದು ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿರುವುದು ವೈರಲ್ ಆಗಿದೆ. ಅಕ್ಕಿ ಕಡಿತಗೊಳಿಸಿದ ಬಗ್ಗೆ ಪ್ರಶ್ನಿಸಿದ ವ್ಯಕ್ತಿಗೆ ಉತ್ತರಿಸಿರುವ ಆಹಾರ ಸಚಿವ ಉಮೇಶ್ ಕತ್ತಿ, ಉತ್ತರ ಕರ್ನಾಟಕದಲ್ಲಿ ಅಕ್ಕಿ ಜತೆಗೆ ಜೋಳ ಕೊಡುತ್ತೇವೆ. ಲಾಕ್​ ಡೌನ್ ಸಂದರ್ಭದಲ್ಲಿ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರ ಕೊಡುತ್ತದೆ.

ಮುಂದಿನ ತಿಂಗಳಿನಿಂದ ಅಕ್ಕಿ ಕೊಡಲಾಗುವುದು ಎಂದು ಉಮೇಶ್ ಕತ್ತಿ ಬೆಳಗಾವಿಯಲ್ಲಿ ಹೇಳಿದಾಗ ಅಲ್ಲಿವರೆಗೆ ಉಪವಾಸ ಒರೋದಾ ಐಲ್ಲಾ ಸತ್ತು ಹೋಗೋದ ಎಂದು ರೈತ ಕೇಳಿದ್ದಾರೆ.ಆಗ ಸಚಿವರರು ಸತ್ತು ಹೋದರೆ ಒಳ್ಳೆಯದು. ಅದಕ್ಕಿಂದ ಅಕ್ಕಿ ಮಾರೋದು ಅಲ್ಲೇ ಬಂದ್​ ಮಾಡಿಬಿಡಿ. ಇಡಿ ನಮಗೆ ಫೋನ್ ಮಾಡಬೇಡಿ ಎಂದಿದ್ದರು. ಈ ಆಡಿಯೋ ಈಗ ಎಲ್ಲೆಡೆ ವೈರಲ್ ಆಗಿದ್ದು, ಸಚಿವರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.