ರಾಜ್ಯದಲ್ಲಿ ಶುರು ಆಯ್ತು ಅನ್ ಲಾಕ್ ಪ್ರಕ್ರಿಯೆ: ಹೊಸ ಮಾರ್ಗಸೂಚಿಯಲ್ಲಿ ಏನಿದೆ, ಏನಿಲ್ಲ..?

Updated: Friday, June 11, 2021, 11:27 [IST]

ರಾಜ್ಯದಲ್ಲಿ ಕಳೆದ ಒಂದೂವರೆ ತಿಂಗಳಿನಿಂದ  ಜಾರಿಯಲ್ಲಿದ್ದ ಲಾಕ್ ಡೌನ್ ಜೂನ್ 14ಕ್ಕೆ ಅಂತ್ಯಗೊಳ್ಳಲಿದೆ. ಈ ಬಾರಿಯೂ ಲಾಕ್ ಡೌನ್ ವಿಸ್ತರಣೆ ಮಾಡುತ್ತಾರೆ ಎಂಬ ಬೇಸರದಲ್ಲಿದ್ದವರಿಗೆ ಇದೀಗ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. 

ರಾಜ್ಯದಲ್ಲಿ ಪಾಸಿಟಿವ್ ಪ್ರಕರಣಗಳು ಹೆಚ್ಚಿರುವ ಜಿಲ್ಲೆಗಳಾದ ಚಿಕ್ಕಮಗಳೂರು , ಶಿವಮೊಗ್ಗ , ದಾವಣಗೆರೆ , ಮೈಸೂರು , ಚಾಮರಾಜನಗರ , ಹಾಸನ , ದಕ್ಷಿಣ ಕನ್ನಡ , ಬೆಂಗಳೂರು ಗ್ರಾಮಾಂತರ , ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಅನ್ವಯವಾಗುವಂತೆ , ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ. ಒಟ್ಟು 11 ಜಿಲ್ಲೆಗಳಲ್ಲಿ ಯಥಾಸ್ಥಿತಿ ಲಾಕ್ ಡೌನ್ ವಿಸ್ತರಣೆಯಾಗಲಿದ್ದು, ಇನ್ನು ಕೆಲ ದಿನ ಮುಂದುವರೆಯುತ್ತದೆ. ಅಲ್ಲದೇ, ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿ ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಸಿಎಂ ಯಡಿಯೂರಪ್ಪ ಅಧಿಕಾರ ನೀಡಿದ್ದಾರೆ. 

ಇನ್ನುಳಿದ ಎಲ್ಲಾ 20 ಜಿಲ್ಲೆಗಳಲ್ಲಿ ಜೂನ್ 14 ರ ಬೆಳಿಗ್ಗೆ 6 ಗಂಟೆಯಿಂದ ಅನ್ ಲಾಕ್ ಪ್ರಕ್ರಿಯೆ ಆರಂಭಗೊಳ್ಳಲಿದೆ. ಪಾರ್ಕ್ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಎಲ್ಲಾ ಕಾರ್ಖಾನೆಗಳನ್ನು ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ . ಆದರೆ , ಗಾಮೆರ್ಂಟ್ ಇಂಡಸ್ಟ್ರಿಗಳು ಶೇ. 30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ. STORE ಎಲ್ಲಾ ಅಗತ್ಯ ಅಂಗಡಿಗಳನ್ನು ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.     

ಇನ್ನು ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ. ಕೋವಿಡ್ ಕರ್ಪ್ಯೂ ರಾತ್ರಿ 7 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ; ನಿರ್ಮಾಣ ಚಟುವಟಿಕೆ ಸಂಬಂಧಿಸಿದ ಅಂಗಡಿಗಳನ್ನು ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ತೆರೆಯಲು ಅವಕಾಶ ನೀಡಲಾಗಿದೆ. ವಾರಂತ್ಯದ ಕರ್ಪ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ ಎಂದು ಸಿಎಂ ತಿಳಿಸಿದ್ದಾರೆ.

ಜೂನ್ 21ಬೆಳಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ ಈ ಸಡಿಲಿಕೆ ಇರಲಿದ್ದು, ಮುಂದಿನ ಕೊರೊನಾ ಪ್ರಕರಣಗಳ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಇನ್ನುಳಿದಂತೆ ವಿವರವಾದ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.