ಜುಲೈ 3 ಹಾಗೂ 4ಕ್ಕೆ ಮತ್ತೆ ಎಲ್ಲಾ ಶಾಲಾ ಕಾಲೇಜುಗಳಿಗೂ ರಜೆ ಘೋಷಣೆ !!

ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಬಟ್ಟ ಬಹಳ ಹೆಚ್ಚಾಗಿದೆ. ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು ರೆಡ್ ಅಲರ್ಟ್ ಅನ್ನ ಕೂಡ ಘೋಷಣೆ ಮಾಡಲಾಗಿದೆ. ಈ ನಡುವೆ ಹವಾಮಾನ ಇಲಾಖೆ ಇನ್ನೊಂದು ವರದಿಯನ್ನ ನೀಡಿದ್ದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಜುಲೈ ಮೂರನೇ ತಾರೀಕಿನಿಂದ ಬಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಅಂತ ಎಚ್ಚರಿಕೆಯನ್ನ ನೀಡಿದೆ.
ಹೌದು ಸ್ನೇಹಿತರೆ ಜುಲೈ ಮೂರನೇ ತಾರೀಕಿನಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಂಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದ್ದು ರೆಡ್ ಅಲರ್ಟ್ ಅನ್ನ ಘೋಷಣೆ ಮಾಡಲಾಗಿದೆ. ಅದೇ ರೀತಿಯಲ್ಲಿ ಜುಲೈ ಮೂರನೇ ತಾರೀಕಿನಿಂದ ಕಳಸ, ಸೂಳ್ಯ, ಕಾರವಾರ, ಸೋಮವಾರಪೇಟೆ, ಪೊನ್ನಂಪೇಟೆ, ಜಯಪುರ, ಕುಂದಾಪುರ, ಸಿರಾಲಿ ಮತ್ತು ಕುಮಟದಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದೆ ಅಂತ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕೇವಲ ಕರಾವಳಿ ಭಾಗಗಳಲ್ಲಿ ಮಾತ್ರವಲ್ಲದೆ ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ ಮತ್ತು ರಾಯಚೂರಿನಲ್ಲಿ ಕೂಡ ಭಾರಿ ಪ್ರಮಾಣದ ಮಳೆಯಾಗಲಿದೆ ಅಂತ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜುಲೈ ಮೂರನೇ ತಾರೀಕಿನಿಂದ ಕರ್ನಾಟಕ, ರಾಜ್ಯಾದ್ಯಂತ ಭಾರಿ ಪ್ರಮಾಣದ ಮಳೆಯಾಗಲಿದ್ದು ಈ ಕಾರಣಗಳಿಂದ ಶಾಲಾ ಕಾಲೇಜು ಮಕ್ಕಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದ್ದು ಈ ಕಾರಣಗಳಿಂದ ಜುಲೈ ಮೂರು ಮತ್ತು ನಾಲ್ಕನೇ ತಾರೀಕಿಗೆ ರಜೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸದ್ಯ ಹವಮಾನ ಇಲಾಖೆ ಎಚ್ಚರಿಕೆಯನ್ನ ನೀಡಿದ್ದು ರಾಜ್ಯ ಶಿಕ್ಷಣ ಇಲಾಖೆ ರಜೆಯ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಕರ್ನಾಟಕದ ಕರಾವಳಿ ಪ್ರದೇಶಗಳಾದ ಮಂಗಳೂರು, ಉಡುಪಿ, ಕುಂದಾಪುರ, ಭಟ್ಕಳ, ಕುಮಟ, ಅಂಕೋಲ ಮತ್ತು ಕಾರವಾರ ಪ್ರದೇಶಗಳಿಗೆ ರೆಡ್ ಅಲರ್ಟ್ ಅನ್ನ ಘೋಷಣೆ ಮಾಡಲಾಗಿದೆ.