ಮತ್ತೆ ಬಂತು ಎಲ್ಲರೂ ಮುಖ ಮುಚ್ಚಿಕೊಂಡು ಓಡಾಡುವ ಕಾಲ :ಹೊಸ ವರ್ಷ ಆಚರಣೆಗೆ ಯಾವುದೆಲ್ಲ ನಿರ್ಬಂಧ ಇದೆ ನೋಡಿ ?

ಮತ್ತೆ ಬಂತು ಎಲ್ಲರೂ ಮುಖ ಮುಚ್ಚಿಕೊಂಡು ಓಡಾಡುವ ಕಾಲ :ಹೊಸ ವರ್ಷ ಆಚರಣೆಗೆ ಯಾವುದೆಲ್ಲ ನಿರ್ಬಂಧ ಇದೆ ನೋಡಿ ?

 ಇದುವರೆವಿಗೂ ಎಲ್ಲ ಸಾರ್ವಜನಿಕರು ಬಿಂದಾಸ್ ಆಗಿ ಯಾವುದೇ ಮಾಸ್ಕ ಧರಿಸದೇ ಎಲ್ಲ ಕಡೆ ಓಡಾಡುತ್ತಿದ್ದರು . ಈಗ ಚೀನಾ ಮತ್ತು ಇತರೆ ದೇಶಗಳಲ್ಲಿ ಕೊರೋನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನಮ್ಮ ಸರ್ಕಾರ ಕೆಲವೊಂದು ನಿರ್ಬಂಧಗಳನ್ನು ವಿಧಿಸಿದೆ . ಅದು ಯಾವುದು ಎಂದು ತಿಳಿಯೋಣ ಬನ್ನಿ . ಎಲ್ಲದಕ್ಕೂ ಮುಖ್ಯವಾಗಿ ಮಾಸ್ಕ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ .

ದೇಶದಲ್ಲಿ ಕೊರೋನಾ ರೂಪಾಂತರಿ ಬಿಎಫ್7 ಪತ್ತೆ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ವಿದೇಶಗಳಿಂದ ಬರುತ್ತಿರುವವರ ಮೇಲೆ ಹದ್ದಿನ ಕಣ್ಣು ಇಡಲಾಗಿದೆ ಬಾರ್, ಪಬ್ ಹಾಗೂ ಹೊಟೇಲ್​ಗಳಲ್ಲಿ ಗ್ರಾಹಕರು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರಬೇಕು ಮತ್ತು ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಧರಿಸಬೇಕು ಎಂದು ಹೇಳಿದರು.

ಎಷ್ಟು ಟೇಬಲ್ ಇದೆಯೋ ಅಷ್ಟು ಚೇರ್​ಗೆ ಮಾತ್ರ ಅನುಮತಿ ನೀಡಲಾಗಿದೆ. ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡುವವರು ಕೂಡ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ನಗರಗಳಿಗೆ ಈ ನಿಯಮ ಅನ್ವಯವಾಗುತ್ತದೆ ಎಂದರು.

ಸುಧಾಕರ್ ಅವರು ಇಂದು ಸುವರ್ಣ ಸೌಧದ ಸಮಿತಿ ಕೊಠಡಿಯಲ್ಲಿ ಕಂದಾಯ ಸಚಿವ ಆರ್ ಅಶೋಕ್ ಜೊತೆ, ಹಿರಿಯ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ವರ್ಚುವಲ್ ಮೂಲಕ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್ ಅವರು, ಹೊಸ ವರ್ಷಾಚರಣೆಗೆ ರಾತ್ರಿ 1 ಗಂಟೆಯವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದರು.

ಇನ್ನೂ ಹೆಚ್ಚಾಗಿ ಜನ ಒಂದೇ ಕಡೆ ಸೇರುವ ಚಿತ್ರಮಂದಿರಗಳು, ಶಾಲಾ-ಕಾಲೇಜುಗಳಲ್ಲೂ ನಿಯಮ ಪಾಲನೆ ಕಡ್ಡಾಯಗೊಳಿಸಲಾಗಿದೆ. ಚಿತ್ರಮಂದಿರ​ಗಳಲ್ಲಿ ಮಾಸ್ಕ್ ಕಡ್ಡಾಯ. ಶಾಲಾ-ಕಾಲೇಜ್​ನ ತರಗತಿಗಳಗೆ ವಿದ್ಯಾರ್ಥಿಗಳು ಪ್ರವೇಶಕ್ಕೂ ಮುಂಚೆ ಸ್ಯಾನಿಟೈಸ್​ ಮಾಡುವುದು, ಮಾಸ್ಕ್​ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ, ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್​ ಧರಿಸುವುದು ಕಡ್ಡಾಯ ಮಾಡಲಾಗಿದೆ ಎಂದು ತಿಳಿಸಿದ್ದಾರೆ.2019ರ ನಂತರ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ನಡೆಯುತ್ತಿದೆ. ಹೀಗಾಗಿ ಬೆಂಗಳೂರಿನ ಎಲ್ಲ ಹೋಟೆಲ್​ನವರು ಹೊಸ ವರ್ಷಾಚರಣೆಯನ್ನು ಜೋರಾಗಿ ಆಚರಿಸಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆ ಹೊಟೇಲ್​ಗಳಲ್ಲಿ ಸಿಸಿಕ್ಯಾಮರಾ ಅಳವಡಿಸಬೇಕು. ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಬೇಕು. ಕ್ರಿಮಿನಲ್​ ಹಿನ್ನೆಲೆಯುಳ್ಳವರು ಬಂದಾಗ ಗಮನ ಹರಿಸುವಂತೆ ಹೊಟೇಲ್​ ಮಾಲಿಕರಿಗೆ ಸೂಚಿಸಿದ್ದೇನೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿದ್ದಾರೆ.

ಇದಕ್ಕೆ ನಿಮ್ಮ ಅಭಿಪ್ರಾಯ ತಿಳಿಸಿ ಮತ್ತು ಎಲ್ಲರಿಗೂ ಶೇರ್ ಮಾಡಿ