ಕೋರೋನಾದ ಹೆಚ್ಚಳ ಹಿನ್ನೆಲೆ; ಬಿಸಿಸಿಐನ ಮಹತ್ವದ ತೀರ್ಮಾನ..

Updated: Tuesday, March 16, 2021, 13:42 [IST]

ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಟ್ವೆಂಟಿ-20 ಸರಣಿ ನಡೆಯುತ್ತಿದೆ. ಮೊದಲನೇ ಪಂದ್ಯವನ್ನು ಇಂಗ್ಲೆಂಡ್ ತಂಡ ಗೆದ್ದುಕೊಂಡರೆ ಎರಡನೇ ತಂಡವನ್ನು ಭಾರತ ಭರ್ಜರಿಯಾಗಿ ಗೆದ್ದುಕೊಂಡಿದೆ. ಈಗ ಸರಣಿ ಸಮಬಲವಾಗಿದ್ದು, ಇನ್ನೂ ಮೂರು ಟಿ-ಟ್ವೆಂಟಿ ಪಂದ್ಯಗಳು ಬಾಕಿ ಇವೆ. ಇಂದು ಮೂರನೇ ಪಂದ್ಯ ಅಹಮದಾಬಾದ್ ನ ನರೆಂದ್ರ ಮೋದಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಈಗಾಗಲೇ ಎಲ್ಲಾ ಸಿದ್ಧತೆಗಳು ನಡೆದಿದ್ದು, ಇದೇ ವೇಳೆ ಬಿಸಿಸಿಐ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. 

ಕೊರೋನಾ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಎಲ್ಲಾ ಪಂದ್ಯಗಳಿಗೂ ಪ್ರೇಕ್ಷಕರಿಗೆ ಅವಕಾಶವನ್ನು ನಿರಾಕರಿಸಿದೆ. ಪ್ರೇಕ್ಷಕರಿಲ್ಲದೆ ಮುಂದಿನ ಮೂರು ಪಂದ್ಯಗಳನ್ನು ಆಡಿಸಲು ಬಿಸಿಸಿಐ ತೀರ್ಮಾನಿಸಿದೆ. ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಉಳಿದ ಮೂರು ಟಿ-20 ಪಂದ್ಯಗಳಿಗೆ ಪ್ರೇಕ್ಷಕರಿಗೆ ಪ್ರವೇಶ ಇರುವುದಿಲ್ಲ ಎಂದು ಬಿಸಿಸಿಐ ಸೋಮವಾರ ತಿಳಿಸಿದೆ.  

ಕೋವಿಡ್ -19 ಪ್ರಕರಣಗಳು ಹೆಚ್ಚಾದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಗುಜರಾತ್ ಕ್ರಿಕೆಟ್ ಅಸೋಸಿಯೇಶನ್ ಉಪಾಧ್ಯಕ್ಷ ಧನರಾಜ್ ನಾಥ್ವಾನಿ ಹೇಳಿದ್ದಾರೆ. ಗುಜರಾತ್‌ನಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಅಹ್ಮದಾಬಾದ್‌ ನ ಸ್ಟೇಡಿಯಂನಲ್ಲಿ ಮಾರ್ಚ್ 16, 18 ಮತ್ತು 20 ರಂದು ವೀಕ್ಷಕರಿಲ್ಲದೆ ಪಂದ್ಯಗಳು ನಡೆಯಲಿವೆ. ಈಗಾಗಲೇ ಈ ಮೂರು ಪಂದ್ಯಗಳಿಗೆ ಟಿಕೆಟ್ ಖರೀದಿಸಿದ ಪ್ರೇಕ್ಷಕರಿಗೆ ಹಣ ಮರುಪಾವತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.