ಬಿಗ್ ಶಾಕಿಂಗ್ ನ್ಯೂಸ : ಆಸ್ಟ್ರೇಲಿಯಾ ತಂಡದ ಖ್ಯಾತ ಕ್ರಿಕೆಟರ್ ಶೇನ್ ವಾರ್ನ್ ನಿಧನ..!
Updated:Friday, March 4, 2022, 20:01[IST]

ಹೌದು ಈಗ ಬಂದಿರುವ ಮಾಹಿತಿ ಪ್ರಕಾರ ಶೇನ್ ವಾರ್ನ್ ಅವರಿಗೆ ಹೃದಯಾಘಾತ ಸಂಭವಿಸಿದ್ದು ನಿಧನ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಆಸ್ಟ್ರೇಲಿಯಾ ಕ್ರಿಕೆಟ್ ದಿಗ್ಗಜ ಶೇನ್ ವಾರ್ನ್ (Shane Warne) ಹೃದಯಾಘಾತದಿಂದ (Heart Attack ) ನಿಧನರಾಗಿರುವುದು ಕ್ರಿಕೆಟ್ ಲೋಕಕ್ಕೆ ಆಘಾತ ತಂದಿದೆ. ಆಸ್ಟ್ರೇಲಿಯಾ ಕ್ರಿಕೆಟ್ ದಂತಕಥೆ, ಸಾರ್ವಕಾಲಿಕ ಶ್ರೇಷ್ಠ ಲೆಗ್ ಸ್ಪಿನ್ನರ್ ಶೇನ್ ವಾರ್ನ್ ಅವರು 52 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತದಿಂದ ಥೈಲ್ಯಾಂಡ್ನ ಕೊಹ್ ಸಮುಯಿಯಲ್ಲಿ ವಾರ್ನ್ ನಿಧನರಾಗಿದ್ದಾರೆ ಎಂದು ಅವರ ಮ್ಯಾನೇಜರ್ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಶೇನ್ ಅವರು ತಮ್ಮ ವಿಲ್ಲಾದಲ್ಲಿದಾಗ ಹೃದಯಾಘಾರವಾಗಿದೆ, ಕೂಡಲೇ ವೈದ್ಯಕೀಯ ನೆರವು ನೀಡಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ವಿಷಯ ತಿಳಿದು ಸೆಹ್ವಾಗ್ ಅವರು ಟ್ವಿಟರ್ ನಲ್ಲಿ ಈ ರೀತಿ ಬರೆದುಕೊಂಡಿದ್ದಾರೆ. 'ನಂಬಲು ಸಾಧ್ಯವಿಲ್ಲ. ಶ್ರೇಷ್ಠ ಸ್ಪಿನ್ನರ್ಗಳಲ್ಲಿ ಒಬ್ಬರು, ಸ್ಪಿನ್ ಕೂಲ್ ಮಾಡಿದ ವ್ಯಕ್ತಿ, ಸೂಪರ್ಸ್ಟಾರ್ ಶೇನ್ ವಾರ್ನ್ ಇನ್ನಿಲ್ಲ.. ಈ ಜೀವನವು ತುಂಬಾ ದುರ್ಬಲವಾಗಿದೆ, ಆದರೆ ಇದನ್ನು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ. ಅವರ ಕುಟುಂಬ, ಸ್ನೇಹಿತರು ಮತ್ತು ಪ್ರಪಂಚದಾದ್ಯಂತದ ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು'...