ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ಶೇನ್ ವಾಟ್ಸನ್ ನಿವೃತ್ತಿ

Updated: Monday, November 2, 2020, 19:07 [IST]

ಆಸ್ಟ್ರೇಲಿಯಾ ಕ್ರಿಕೆಟ್‌ನ ಆಲ್‌ರೌಂಡರ್‌ ಆಟಗಾರ ಶೇನ್ ವ್ಯಾಟ್ಸನ್ ಎಲ್ಲ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿಯಾಗಲಿದ್ದಾರೆ ಎಂದು ವರದಿಯಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ಡ್ರೆಸ್ಸಿಂಗ್ ಕೊಠಡಿಯಲ್ಲಿ ತಮ್ಮ ನಿವೃತ್ತಿ ನಿರ್ಧಾರ ಪ್ರಕಟಿಸುವಾಗ ವ್ಯಾಟ್ಸನ್ ಭಾವುಕರಾಗಿದ್ದರು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಆದರೆ, ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಬರಬೇಕಿದೆ.

ವ್ಯಾಟ್ಸನ್ ಆಸ್ಟ್ರೇಲಿಯಾ ಪರ 59 ಟೆಸ್ಟ್, 190 ಏಕದಿನ ಮತ್ತು 50 ಟಿ-20 ಪಂದ್ಯಗಳನ್ನು ಆಡಿದ್ದಾರೆ. ಐಪಿಎಲ್‌ನಲ್ಲಿ ಅವರು ರಾಜಸ್ಥಾನ್ ರಾಯಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದಾರೆ.