ಮತ್ತೆ ಹೊಸ ಹಾಟ್ ಲುಕ್ ನಲ್ಲಿ ಕಾಣಿಸಿಕೊಂಡಿರುವ ರಶ್ಮಿಕಾ ಮಂದಣ್ಣ; ವಿಡಿಯೋ ವೈರಲ್

ಮತ್ತೆ ಹೊಸ ಹಾಟ್ ಲುಕ್ ನಲ್ಲಿ ಕಾಣಿಸಿಕೊಂಡಿರುವ ರಶ್ಮಿಕಾ ಮಂದಣ್ಣ; ವಿಡಿಯೋ ವೈರಲ್

ನಟಿ ರಶ್ಮಿಕಾ ಮಂದಣ್ಣ ಅವರು ಇದೀಗ ಪ್ಯಾನ್ ಇಂಡಿಯಾ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ಅವರು ಮುಟ್ಟಿದೆಲ್ಲಾ ಚಿನ್ನವಾಗುತ್ತಿದೆ ಎಂದರೆ ತಪ್ಪಾಗುವುದಿಲ್ಲ. ಕನ್ನಡದ ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ತಮ್ಮ ಸಿನಿ ಜರ್ನಿ ಶುರು ಮಾಡಿದ ನಟಿ ರಶ್ಮಿಕಾ ಮಂದಣ್ಣ ಇದೀಗ ಬಾಲಿವುಡ್ ವರೆಗೂ ಹೋಗಿ ತಲುಪಿದ್ದಾರೆ. 

ಇನ್ನು ನಟಿ ರಶ್ಮಿಕಾ ಮಂದಣ್ಣ ಕುರಿತು ಆಗಾಗ ಕೆಲವು ಮಾತುಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ನಟಿ ರಶ್ಮಿಕಾ ಮಂದಣ್ಣ ಅವರಿಗೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿ ಬಳಗವಿದೆ. ಇನ್ನು ಅವರನ್ನು ಪ್ರೀತಿಸುವವರಿಗಿಂತ ಜನರು ಅವರನ್ನು ಧ್ವೆಶಿಸುವುದೆ ಹೆಚ್ಚು. ಇನ್ನು ನಟಿ ರಶ್ಮಿಕಾ ಮಂದಣ್ಣ ಅವರು ಏನೇ ಮಾಡಿದರೂ ಸಹ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೊಲ್ ಮಾಡಲಾಗುತ್ತದೆ.

ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಸಿಕ್ಕಾಪಟ್ಟೆ ಟ್ರೋಲ್ ಆಗುವ ಮೂಲಕ ನಟಿ ರಶ್ಮಿಕಾ ಮಂದಣ್ಣ ಸುದ್ದಿಯಲ್ಲಿರುತ್ತಾರೆ. ರಶ್ಮಿಕಾ ಮಂದಣ್ಣ ಏನೇ ಮಾಡಿದರು ಸಹ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಟ್ರೋಲ್ ಪೇಜ್ ಗಳು ಹಿಗ್ಗಾಮುಗ್ಗಾ ಮಾಡುತ್ತಾರೆ. ರಶ್ಮಿಕಾ ಮಂದಣ್ಣ ಮಾತ್ರ ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ.

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿರುವಂತಹ ನಟಿ. ತಮ್ಮ ಜೀವನದ ಅನೇಕ ಖುಷಿಯ ಹಾಗೂ ದುಃಖದ ವಿಚಾರಗಳನ್ನು ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇನ್ನು ಇದೀಗ ನಟಿ ತಮ್ಮ ಹಾಟ್ ಫೋಟೋ ಶೂಟ್ ಮಾಡಿಸಿ ಅದನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ

ನಟಿ ರಶ್ಮಿಕಾ ಮಂದಣ್ಣ ಈ ಹಿಂದೆ ಸಹ ಹಲವಾರು ಬಾರಿ ಹಾಟ್ ಫೋಟೋಗಳನ್ನು ಹಂಚಿಕೊಂಡು ಪಡ್ಡೆ ಹುಡುಗರ ನಿದ್ದೆ ಗೆಡಿಸಿದ್ದಾರೆ. ಆದರೆ ಇದೀಗ ನಟಿ ತಮ್ಮ ಇನ್ಸ್ತಾಗ್ರಾಮ್ ನಲ್ಲಿ ಒಂದು ವಿಡಿಯೋ ಹಂಚಿಕೊಂಡಿದ್ದು, ಈ ವಿಡಿಯೋದಲ್ಲಿ ನಟಿ ರಶ್ಮಿಕಾ ಮಂದಣ್ಣ ಬಹಳ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಕಪ್ಪು ಹಾಗೂ ಬೂದು ಬಣ್ಣದ ತುಂಡು ಬಟ್ಟೆ ಧರಿಸಿದ್ದು, ಸದ್ಯ ನಟಿ ಈ ಹಾಟ್ ಲುಕ್ ಗೆ ಪಡ್ಡೆ ಹುಡುಗರು ಫಿದಾ ಆಗಿದ್ದಾರೆ. ಇನ್ನು ನಟಿ ರಶ್ಮಿಕಾ ಅವರ ಈ ಪೋಸ್ಟ್ ಗೆ ಅನೇಕ ಜನರು ಹಲವಾರು ರೀತಿ ಕಾಮೆಂಟ್ ಮಾಡುತ್ತಿದ್ದಾರೆ. ಇನ್ನು ಕೆಲವರು ದಂತದ ಗೊಂಬೆ ಎಂದು ಸಹ ನಟಿ ರಶ್ಮಿಕಾ ಅವರನ್ನು ಹೋಗಳುತ್ತಿದ್ದಾರೆ.