ಡೆತ್ ನೋಟ್ ಬರೆದಿಟ್ಟು ಜಗತ್ತಿಗೆ ವಿದಾಯ ಹೇಳಲು ನಿರ್ಧರಿಸಿದ್ದೆ ಕಿರಿಕ್ ಕೀರ್ತಿ ಶಾಕಿಂಗ್ ನ್ಯೂಸ್

ಡೆತ್ ನೋಟ್ ಬರೆದಿಟ್ಟು ಜಗತ್ತಿಗೆ ವಿದಾಯ ಹೇಳಲು ನಿರ್ಧರಿಸಿದ್ದೆ ಕಿರಿಕ್ ಕೀರ್ತಿ ಶಾಕಿಂಗ್ ನ್ಯೂಸ್

ಬಿಗ್ ಬಾಸ್ ಸೆನ್ಸೇಷನ್ ಕಿರಿಕ್ ಕೀರ್ತಿ ಈಗ ಸಂಕಷ್ಟದಲ್ಲಿ ಸಿಲುಕಿದ್ದಾರೆ, ಕಿರಿಕ್ ಕೀರ್ತಿಗೆ ಎಲ್ಲಾ ಸರಿ ಹೋಗುತ್ತಿದ್ದ ಅವರು ಇದ್ದಕ್ಕಿದ್ದಂತೆ ಮಾಧ್ಯಮದಿಂದ ಕಣ್ಮರೆಯಾದರು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವುದನ್ನು ನಿಲ್ಲಿಸಿದರು. ಅವರ ಜೀವನದಲ್ಲಿ ನಿಜವಾಗಿಯೂ ಏನಾಯಿತು. 

ಅವನು ಕೆಲವು ಜನರ ಒತ್ತಡಕ್ಕೆ ಒಳಗಾಗುತ್ತಿದ್ದನೇ? ಅವರು ಕನ್ನಡ ಭಾಷೆಯ ಬೆಂಬಲಿಗರು ಮತ್ತು ಸಾಮಾಜಿಕ ಕಾರ್ಯಕರ್ತರಾಗಿದ್ದರು. ಅವರು ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಏಕೆ ಹೇಳಿದ್ದಾರೆ ಎಂಬುದನ್ನು ಇಲ್ಲಿ ನೋಡಿ. 

ನಿರ್ಧಾರ ಮಾಡಿಬಿಟ್ಟಿದ್ದೆ...ಜಗತ್ತಿಗೆ ವಿದಾಯ ಹೇಳಿಬಿಡಬೇಕು ಅಂತ...ಕಾರಣಗಳು ಹಲವು...ವೈಯಕ್ತಿಕ ಜೀವನದಲ್ಲಾದ ಕೆಲವು ಘಟನೆಗಳು ನನ್ನನ್ನು ಇನ್ನಿಲ್ಲದಂತೆ ಕುಗ್ಗಿಸಿತ್ತು... ಜೀವನದ ಮೇಲೊಂದು ಕೆಟ್ಟ ನಿರಾಸಕ್ತಿ ಬಂದಿತ್ತು.

 ಎಲ್ಲ ಪ್ರಯತ್ನಗಳೂ ಕೈಕೊಡ್ತಿತ್ತು... ಒಂದು ಕಡೆ ಜಿಹಾದಿಗಳ ಬೆದರಿಕೆ ಕರೆಗಳು ಕುಟುಂಬವನ್ನು ಡಿಸ್ಟರ್ಬ್ ಮಾಡಿತ್ತು... ಸೋಷಿಯಲ್ ಮೀಡಿಯಾದಿಂದಲೂ ಸ್ವಲ್ಪ ದೂರವೇ ಇದ್ದೆ... ಆದ್ರೆ ಈಗ ಎಲ್ಲದಕ್ಕೂ ಹೆದರಿ ಹೋಗಿಬಿಟ್ರೆ ನನ್ನನ್ನು ಈ ಪರಿಸ್ಥಿತಿಗೆ ತಂದವರಿಗೆ ಉತ್ತರ ಕೊಡೋದು ಹೇಗೆ..? 

ನನ್ನ ನಂಬಿ ಇನ್ವೆಸ್ಟ್ ಮಾಡಿರೋರಿಗೆ ನ್ಯಾಯ ಸಿಗೋದು ಹೇಗೆ...? ನನ್ನ ಮಗನ ಭವಿಷ್ಯ ಕಟ್ಟೋದು ಹೇಗೆ..? ಈ ಪ್ರಶ್ನೆಗಳು ಕಾಡಿದ್ವು...ಟೈಪ್ ಮಾಡಿದ ಡೆತ್ ನೋಟ್ ಡಿಲೀಟ್ ಮಾಡ್ದೆ.. 10 ನಿಮಿಷ ಧ್ಯಾನ ಮಾಡ್ದೆ... 

ತಡವಾದ್ರೂ ಪರವಾಗಿಲ್ಲ ನನ್ನ ನಂಬಿದ ಎಲ್ಲರಿಗೂ ಅವರಿಟ್ಟ ನಂಬಿಕೆಯನ್ನು ಉಳಿಸಿಕೊಳ್ಳೋ ಹಾಗೆ ಸಾಧಿಸಬೇಕು ಅಂತ ಡಿಸೈಡ್ ಮಾಡ್ದೆ...   ಮನಸ್ಸಲ್ಲಿದ್ದ ಕೆಟ್ಟ ಅಲೋಚನೆಗಳನ್ನು ಕಿತ್ತು ಬಿಸಾಕಿದ್ದೇನೆ...ಕೆಲವರನ್ನು ಕಳೆದುಕೊಂಡಿದ್ದರ ಹೊರತು ಬೇರೆ ಎಲ್ಲವನ್ನೂ ಟ್ರ್ಯಾಕಿಗೆ ತರುವ ಪ್ರಾಮಾಣಿಕ ಪ್ರಯತ್ನ ಮಾಡ್ತೀನಿ...

ನಿಮ್ಮ ಬೆಂಬಲ‌ ಜೊತೆಗಿರಲಿ... ಡಿಪ್ರೆಷನ್‌ನಿಂದ ಮತ್ತೆ ವಾಪಾಸ್ ಬರಲು ಸಹಕರಿಸಿ... ಮತ್ತೆ ನನ್ನ ಮುಖದ ಮೇಲಿನ ನಗು ವಾಪಾಸ್ ತರುವ ತನಕ ಪ್ರಯತ್ನ‌ ನಿರಂತರ... ಇದು ಹೇಳಿಕೊಳ್ಳಬಾರದ ವಿಷಯ.. ಆದ್ರೆ ಹೇಳಿಕೊಂಡರಷ್ಟೆ ಸಮಾಧಾನ...