ಬೆಂಗಳೂರ್ನಲ್ಲಿ ಘನ ಘೋರ ದುರಂತ :ಮೆಟ್ರೋ ಪಿಲ್ಲರ್​​ ಕಬ್ಬಿಣದ ರಾಡುಗಳು ಬಿದ್ದು ತಾಯಿ ಮತ್ತು ಮಗು ಸಾವು

ಬೆಂಗಳೂರ್ನಲ್ಲಿ ಘನ ಘೋರ ದುರಂತ :ಮೆಟ್ರೋ ಪಿಲ್ಲರ್​​ ಕಬ್ಬಿಣದ ರಾಡುಗಳು ಬಿದ್ದು ತಾಯಿ ಮತ್ತು ಮಗು ಸಾವು

ಹೌದು ಇತ್ತೀಚಿಗೆ ಅಪಘಾತಗಳು ತುಂಬಾ ಹೆಚ್ಚಾಗಿವೆ  ಇದ್ರಲ್ಲಿ ಕೆಲವೊಂದು ಸರಿ ಡ್ರೈವ್ ಮಾಡುತ್ತಿರುವರ ನಿರ್ಲಕ್ಷ ಇರುತ್ತದೆ . ಆದರೆ ಕೆಲವೊಂದು ಸರಿ ತಮ್ಮದು ಏನು ತಪ್ಪು ಇಲ್ಲ ಅಂದರು ಅವರು ಅಪಘಾತಕ್ಕೆ ತುತ್ತಾಗೆ ಪ್ರಾಣ ಕಳೆದು ಕೊಂಡಿದ್ದಾರೆ . ಅಂತಹದ ಒಂದು ಘಟನೆ ಬ್ಯಾಂಗಲೋರ್ ನಲ್ಲಿ ನಡಿದಿದೆ .

ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ನ ಕಬ್ಬಿಣದ ರಾಡ್‌ಗಳು ದ್ವಿಚಕ್ರ ವಾಹನದ ಮೇಲೆ ಕುಸಿದು ಬಿದ್ದ ಪರಿಣಾಮ ಮಹಿಳೆ ಮತ್ತು ಆಕೆಯ ಎರಡು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ. ಬೆಳಿಗ್ಗೆ 10:30 ರ ಸುಮಾರಿಗೆ ಘಟನೆ ನಡೆದಿದ್ದು, ತೇಜಸ್ವಿನಿ (28) ಮತ್ತು ಎರಡೂವರೆ ವರ್ಷದ ಮಗು ವಿಹಾನ್ ಸಾವನ್ನಪ್ಪಿದ ದುರ್ದೈವಿಗಳು.ಬೆಂಗಳೂರಿನ ಕಲ್ಯಾಣ್‌ನಗರದಿಂದ ಎಚ್‌ಆರ್‌ಬಿಆರ್‌ ಲೇಔಟ್‌ಗೆ ಹೋಗುವ ರಸ್ತೆಯಲ್ಲಿ ನಿರ್ಮಾಣವಾಗುತ್ತಿದ್ದ ಮೆಟ್ರೊ ರೈಲು ಪಿಲ್ಲರ್‌ ಕುಸಿದು ಬಿದ್ದಿದೆ. ಈ ವೇಳೆ ರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ಲೋಹಿತ್ ಕುಮಾರ್, ಆತನ ಪತ್ನಿ ತೇಜಸ್ವಿನಿ ಹಾಗೂ ಅವರ ಇಬ್ಬರು ಪುತ್ರರು ಗಾಯಗೊಂಡಿದ್ದಾರೆ. ಕೂಡಲೇ ಗಾಯಾಗಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ದುರಾದೃಷ್ಟವಶಾತ್ ತಾಯಿ ಮತ್ತು ಮಗು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಧಾರವಾಡ ಮೂಲದ ಸಿವಿಲ್ ಇಂಜಿನಿಯರ್ ಲೋಹಿತ್ ಕುಮಾರ್ ಮತ್ತು ಮಾನ್ಯತಾ ಟೆಕ್ ಪಾರ್ಕ್​ನಲ್ಲಿರುವ ಮೋಟೋರೋಲಾ ಕಂಪನಿಯಲ್ಲಿ ವೃತ್ತಿ ಹೊಂದಿದ್ದ ತೇಜಸ್ವಿನಿ ನಾಗವಾರದಲ್ಲಿ ನೆಲೆಸಿದ್ದರು. ಅದರಂತೆ ಲೋಹಿತ್ ಅವರು ನಾಗವಾರದಿಂದ ಮಾನ್ಯತಾ ಟೆಕ್ ಪಾರ್ಕ್ ಬಳಿ ಪತ್ನಿಯನ್ನ ಬಿಟ್ಟು ನಂತರ ತನ್ನ ಇಬ್ಬರು ಮಕ್ಕಳನ್ನ ಬೇಬಿ ಸಿಟ್ಟಿಂಗ್​ಗೆ ಬಿಡಲು ತೆರಳುತ್ತಿದ್ದಾಗ ಹೆಣ್ಣೂರು ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಏಕಾ ಏಕಿಯಾಗಿ ಬಿದ್ದಿದ್ದು ಎಲ್ಲರಿಗೂ ಗಾಯಗಳಾಗಿದ್ದವು. ಗಾಯಾಳುಗಳ ಪೈಕಿ ತೇಜಸ್ವಿನಿ ಮತ್ತು ಓರ್ವ ಪುತ್ರ ವಿಹಾನ್ ಗಂಭೀರವಾಗಿ ಗಾಯಗೊಂಡಿದ್ದರು. ಇವರಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಇಂತಹ ಘಟನೆ ನಡೆದಿರುವದಕ್ಕೆ ಯಾರನ್ನು ಹೊಣೆ ಮಾಡಬೇಕು . ಆ ಕುಟುಂಬಕ್ಕೆ ಆಗಿರುವ ಪ್ರಾಣ ಹಾನಿ ಯಾರು ತುಂಬಿ ಕೊಡುತ್ತಾರೆ . ಇದಕ್ಕೆ ನಿಮ್ಮ ಅಭಿಪ್ರಾಯ ತಿಳಿಸಿ ಹಾಗು ಶೇರ್ ಮಾಡಿ